Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ವಿವೇಕ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ
    Uncategorized

    ಕೋಟ ವಿವೇಕ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಕೋಟ ವಿದ್ಯಾ ಸಂಘ ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು ವಿಜೃಂಭಣೆಯಿಂದ ನಡೆಯಿತು.

    Click Here

    Call us

    Click Here

    ಸಮಾರಂಭವನ್ನು ಭಾರತೀಯ ಮಿಲಿಟರಿಯಲ್ಲಿ ಆಡಳಿತಾತ್ಮಕ ಸಹಾಯಕ ಅಧಿಕಾರಿಯಾಗಿ ಜಾಮ್‌ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ಎಸ್.ಜಿ.ಟಿ. ಶ್ರೀಕಾಂತ್ ಮಧ್ಯಸ್ಥ ಅವರು ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ, ಮಾತನಾಡಿ, ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಿಂದ ಕಲಿಯುವ ಶಿಸ್ತು, ಸಂಯಮ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವವು ಮಿಲಿಟರಿ ಸೇವೆ ಸೇರಿದಂತೆ ಯಾವುದೇ ಉನ್ನತ ಸಾಧನೆಗೆ ಬುನಾದಿಯಾಗುತ್ತದೆ.

    ಕ್ರೀಡೆಯಲ್ಲಿ ಸಕ್ರಿಯರಾಗಿದ್ದರಿಂದಲೇ ನಾನು ಭಾರತೀಯ ಮಿಲಿಟರಿ ವೃತ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಯಿತು. ವಿದ್ಯಾರ್ಥಿ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದ ಬಹುಮಾನ ಪಡೆದಿದ್ದನ್ನು ಸ್ಮರಿಸಿದ ಅವರು, ತಮ್ಮ ಈ ಸಾಧನೆಗೆ ಸಹಕರಿಸಿದ ಎಲ್ಲ ದೈಹಿಕ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳು ಕೇವಲ ಗೆಲುವಿಗಾಗಿ ಅಲ್ಲದೇ ಉತ್ತಮ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕೆಂದು ಕರೆ ನೀಡಿದರು.

    ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾ ಸಂಘದ ಜತೆ ಕಾರ್ಯದರ್ಶಿ ಪಿ. ಮಂಜುನಾಥ್ ಉಪಾಧ್ಯಾ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ಪ್ರಶಸ್ತಿ ಮುಖ್ಯವಲ್ಲ, ಎಲ್ಲರೂ ಭಾಗವಹಿಸುವುದು ಮುಖ್ಯ ಎಂದು ಕರೆ ನೀಡಿ ಕ್ರೀಡೆಯಿಂದ ಮನಸ್ಸು ಹಗುರವಾಗುತ್ತದೆ ಮತ್ತು ಇದು ಶ್ರೀಕಾಂತ್ ಮಧ್ಯಸ್ಥ ಅವರ ಹಾಗೆ ಉನ್ನತ ಸಾಧನೆ ಗೈಯ್ಯಲು ಸಹಾಯಕ ಎಂದರು.

    ಕಾರ್ಯಕ್ರಮದಲ್ಲಿ ಯೋಧ ಶ್ರೀಕಾಂತ್ ಮಧ್ಯಸ್ಥ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೀತಿ ರೇಖಾ, ಬಾಲಕರ ಪ್ರೌಢಶಾಲೆಯ ಹಿರಿಯ ಸಹಾಯಕ ಶಿಕ್ಷಕ ಪ್ರೇಮಾನಂದ ಮತ್ತು ಪ್ರಕಾಶ ಮಧ್ಯಸ್ಥ ಉಪಸ್ಥಿತರಿದ್ದರು.

    ಕ್ರೀಡೋತ್ಸವವು ವಿವೇಕ ಸಂಸ್ಥೆಯ ವಿದ್ಯಾರ್ಥಿಗಳ ಎನ್‌ಸಿಸಿ ಪರೇಡ್ ಮತ್ತು ಬ್ಯಾಂಡ್‌ನೊಂದಿಗೆ ಭವ್ಯವಾದ ಪಥಸಂಚಲನದೊಂದಿಗೆ ಆರಂಭಗೊಂಡಿತು. ಯೋಧ ಶ್ರೀಕಾಂತ್ ಮಾಧ್ಯಾಸ್ಥ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

    ಕಾರ್ಯಕ್ರಮ ನಿರ್ವಹಣೆಯನ್ನು ಚಂದ್ರಶೇಖರ್ ಎಚ್. ಎಸ್., ನರೇಂದ್ರ ಕುಮಾರ್, ಶಿವಪ್ರಸಾದ್ ಶೆಟ್ಟಿಗಾರ್ ಹಾಗೂ ಮಹಾಲಕ್ಷ್ಮಿ ಅವರು ನಿರ್ವಹಿಸಿದರು. ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಸ್ವಾಗತಿಸಿದರು.

    ಕ್ರೀಡಾಕೂಟದ ಜವಾಬ್ದಾರಿಯನ್ನು ದೈಹಿಕ ಶಿಕ್ಷಕರಾದ ಮಮತಾ, ಗಣೇಶ್ ಶೆಟ್ಟಿ,  ವಿಶ್ವನಾಥ್ ನಾಯಕ್ ಹಾಗೂ ರಕ್ಷತ್ ಅವರು ಯಶಸ್ವಿಯಾಗಿ ನಿಭಾಯಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಕೋಟ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    20/05/2026

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026
    Leave A Reply Cancel Reply

    1 + 12 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.