Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ
    alvas nudisiri

    ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಕಾನೂನು ಕಾಲೇಜಿನ ನೂತನ ರಾಷ್ಟೀಯ ಸೇವಾ ಯೋಜನೆ ಹಾಗೂ ರೆಡ್‌ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ ಕುವೆಂಪು ಸಭಾಭವನದಲ್ಲಿ ನೆರವೇರಿತು.

    Click Here

    Call us

    Click Here

    ಯನಪೋಯ ವಿಶ್ವವಿದ್ಯಾಲಯದ ರಾಷ್ಟೀಯರಾಷ್ಟೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕಿ ಹಾಗೂ ವಿಸ್ತರಣೆ ಮತ್ತು ಔಟ್‌ರೀಚ್ ಚಟುವಟಿಕೆಗಳ ನಿರ್ದೇಶಕಿ  ಹಾಗೂ ಆಳ್ವಾಸ್‌ನ ಹಿರಿಯ ವಿದ್ಯಾರ್ಥಿನಿ ಡಾ. ಅಶ್ವಿನಿ ಶೆಟ್ಟಿ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜು ಅವಧಿಯಲ್ಲಿ ನೀಡಲ್ಪಡುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡರೆ, ಅದು ಜೀವನದ ದಿಕ್ಕನ್ನೇ ಬದಲಿಸಬಲ್ಲದು. ಎನ್‌ಎಸ್‌ಎಸ್‌ನಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ನಾಯಕತ್ವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುತ್ತವೆ.  

    ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಅರಿಯುವ ಮತ್ತು ಪರಿಹಾರ ಮಾರ್ಗಗಳನ್ನು ಹುಡುಕುವ ಅಪರೂಪದ ಅವಕಾಶ ಇಲ್ಲಿ ದೊರಕುತ್ತದೆ. ವಿವಿಧ ನವೀನ ಯೋಜನೆಗಳು, ಸಂಶೋಧನಾ ಪ್ರಕಟಣೆಗಳು ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ಸಾಧ್ಯವಾಗಬಲ್ಲದು. ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡು, ನಂತರ ಪ್ರೀ-ಟೆಸ್ಟ್ ಹಾಗೂ ಪೋಸ್ಟ್-ಟೆಸ್ಟ್ ವಿಧಾನದಲ್ಲಿ ಅಧ್ಯಯನ ನಡೆಸಿ, ಅದರ ಫಲಿತಾಂಶವನ್ನು ಸಂಶೋಧನಾ ಲೇಖನವಾಗಿ ಪ್ರಕಟಿಸಬಹುದು ಎಂದರು.

    ಕೇಂದ್ರ ಸರ್ಕಾರದ ಮೇರಾ ಯುವ ಭಾರತ್ ಯೋಜನೆಯ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಅನುಭವಾತ್ಮಕ ಕಲಿಕೆಯನ್ನು ಪಡೆಯಬಹುದು. ಇವುಗಳ ಮೂಲಕ ವಿದ್ಯಾರ್ಥಿಗಳು ನೈಜ ಜಗತ್ತಿನ ಅನುಭವವನ್ನು ಪಡೆದು, ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆಯನ್ನು ನೀಡಬಹುದು. ದಕ್ಷಿಣ ಕನ್ನಡದವರು ಹಿಂದೆ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಅನೇಕ ಅನುದಾನಗಳು ಲಭ್ಯವಿವೆ. ಆದರೆ ದಕ್ಷಿಣ ಕನ್ನಡದ ಜನರು ಅವುಗಳ ಲಾಭ ಪಡೆಯುವಲ್ಲಿ ಸೋಲುತ್ತಿದ್ದಾರೆ. ಉತ್ತರ ಭಾರತದ ವಿದ್ಯಾರ್ಥಿಗಳು ಇದರ ಹೆಚ್ಚಿನ ಲಾಭಪಡೆಯುತ್ತಿದ್ದಾರೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಎನ್‌ಎಸ್‌ಎಸ್‌ನ ಉದ್ದೇಶ ಸಮಾಜ ನಿರ್ಮಾಣ ಹಾಗೂ ಪರಸ್ಪರ ಬೆಳವಣಿಗೆ. ಸಮಾನ ಮನಸ್ಕರು ಜೊತೆಯಾಗಿ ಶ್ರಮಿಸಿದರೆ, ಬದಲಾವಣೆಯ ಶತಸಿದ್ಧ.  

    ಕಾರ್ಯಕ್ರಮದಲ್ಲಿ ಆಳ್ವಾಸ್ ಆಯುರ್ವೇಧ ಕಾಲೇಜಿನ ಪ್ರಾಚರ್ಯ ಡಾ. ಸುಶೀಲ್ ಶೆಟ್ಟಿ, ಕಾನೂನು ಕಾಲೇಜಿನ ಪ್ರಾಚರ್ಯ ಮಹಾಂತೇಶ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು.

    Click here

    Click here

    Click here

    Call us

    Call us

    ಡಾ. ಅಶ್ವಿನಿ ಶೆಟ್ಟಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹರ್ಷಲ್ ನಿರೂಪಿಸಿ, ನಿಶಾಂತ್ ಪೂಜಾರಿ ಸ್ವಾಗತಿಸಿ, ನಿಶಿಕರವೆ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    eleven − one =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.