Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಬದಕೋಣೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ
    ಊರ್ಮನೆ ಸಮಾಚಾರ

    ಕಂಬದಕೋಣೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು, ಸರ್ಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯ ಉದ್ಘಾಟನಾ ಕಾರ್ಯಕ್ರಮವು ಇತ್ತೀಚಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಉಪ್ಪುಂದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳ ವೈಜ್ಞಾನಿಕ ಪರಿಕಲ್ಪನೆಗಳನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಲು ವೇದಿಕೆಯಾಗಿದೆ. ಇದೊಂದು ಅಗಾಧವಾದ ಜ್ಞಾನ ಸಂಪತ್ತು ಸಾಧನೆಯ ಸಾಧನವಾಗಿದೆ. ವಿದ್ಯಾರ್ಥಿಗಳ ವೈಜ್ಞಾನಿಕ ಮನೋಭಾವನೆಯೊಂದಿಗೆ ತಂತ್ರಜ್ಞಾನದ ಆಸಕ್ತಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ ನಾಯ್ಕ ಅವರು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಮೆಚ್ಚಿಕೊಂಡರು. ಸಂಸ್ಥೆಯ ಪ್ರಾಂಶುಪಾಲರಾದ ಗಣಪತಿ ಅವಬ್ರತ್ ಕಾರ್ಯಕ್ರಮಕ್ಕೆ ಶುಭ ಕೋರಿದರು.  

    ಕಾಲೇಜು ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹಾಗೂ ಪ್ರೌಢಶಾಲಾ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷರಾದ ಅರುಣ್ ಹೆಬ್ಬಾರ್ ಹಾಗೂ ಪ್ರಭಾರ ಉಪ ಪ್ರಾಂಶುಪಾಲರಾದ  ಠಾಕೇಶ್ ಪಟಗಾರರು ಉಪಸ್ಥಿತರಿದ್ದರು.

    ವಸ್ತು ಪ್ರದರ್ಶನ ವೀಕ್ಷಿಸಲು ಆಗಮಿಸಿದ ಬೈಂದೂರು ಶಾಸಕರು ಗುರುರಾಜ ಗಂಟಿಟಿಹೊಳೆ ಅವರು ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನದ ವರ್ಕಿಂಗ್ ಮಾದರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ, ಶುಭ ಹಾರೈಸಿದರು.

    Click here

    Click here

    Click here

    Click Here

    Call us

    Call us

    ವಿಜ್ಞಾನವಸ್ತು ಪ್ರದರ್ಶನದಲ್ಲಿ ವಿಜ್ಞಾನ ಚಿತ್ರಗಳ ರಂಗೋಲಿ, ಭೌತಶಾಸ್ತ್ರ, ರಸಾಯನಶಾಸ್ತ್ರ ಜೀವಶಾಸ್ತ್ರ, ಗಣಿತಶಾಸ್ತ್ರ,ವಿ ಭಾಗದ ವರ್ಕಿಂಗ್ ಮಾಡೆಲ್ಸ್ ಪುರಾತನ ಕಾಲದ ವಸ್ತುಗಳು, ಮೀನು ಸಾಕಾಣಿಕೆ, ಕಂಬಳದ ಸಲಕರಣೆಗಳು,ಕೃಷಿಯಂತ್ರಧಾರೆ ಹಾಗೂ ಕರಕುಶಲ ಕಲೆಗಳ ವಸ್ತುಗಳ ಪ್ರದರ್ಶನಗೊಂಡವು.

    ಸುತ್ತಮುತ್ತಲಿನ ಪ್ರಾಥಮಿಕ ಶಾಲೆಗಳಾದ ಕಂಬದಕೋಣೆ, ನಾಯಕನ್ ಕಟ್ಟೆ, ಹೇರೆಂಜಾಲು, ಕಾಲ್ತೋಡು, ಕೊಡೇರಿ, ಹಿಂದುಸ್ತಾನಿ ನಾಗೂರು, ಕನ್ನಡ ನಾಗೂರು,ಸಂದೀಪನ ಆಂಗ್ಲ ಮಾಧ್ಯಮ ಶಾಲೆ, ಹೋಲಿ ಕ್ರಾಸ್ ಬೈಂದೂರು ಹಾಗೂ ಮಾದರಿ ಶಾಲೆ ಮರವಂತೆ ಇಲ್ಲಿಯ ವಿದ್ಯಾರ್ಥಿಗಳು ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

    ಕಾರ್ಯಕ್ರಮದಲ್ಲಿ ಸಿಆರ್‌ಪಿ ಮಿತ್ರರು, ಎಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್‌.ಡಿ.ಎಂ.ಸಿ ಸದಸ್ಯರು ಪೋಷಕರು ಹಾಜರಿದ್ದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಂಡರು. ಕಾರ್ಯಕ್ರಮವನ್ನ್ನುಸಂಸ್ಥೆಯ ಕನ್ನಡ ಅಧ್ಯಾಪಕರಾದ ವಿಶ್ವನಾಥ್ ಶೆಟ್ಟಿ ನಿರೂಪಿಸಿ, ವಂದನೆಗೈದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    eighteen − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.