Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನವರಿ 24, 25, 26ರಂದು ಬೈಂದೂರು ಉತ್ಸವ – ದಿನಾಂಕ ಘೋಷಿಸಿದ ಶಾಸಕ ಗುರುರಾಜ ಗಂಟಿಹೊಳೆ
    ಊರ್ಮನೆ ಸಮಾಚಾರ

    ಜನವರಿ 24, 25, 26ರಂದು ಬೈಂದೂರು ಉತ್ಸವ – ದಿನಾಂಕ ಘೋಷಿಸಿದ ಶಾಸಕ ಗುರುರಾಜ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ವಿಶ್ವದಾದ್ಯಂತ ನೆಲೆಸಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಜನರು, ಸರಕಾರ ಹಾಗೂ ಉದ್ಯಮಿಗಳು ಬೈಂದೂರಿನತ್ತ ತಿರುಗಿ ನೋಡುವಂತೆ ಮಾಡುವುದು ಮತ್ತು ಆ ಮೂಲಕ ವಿವಿಧ ಆಯಾಮಗಳಲ್ಲಿ ಬೈಂದೂರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಬೈಂದೂರು ಉತ್ಸವದ ಮೂಲ ಧ್ಯೇಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ ವರ್ಷ ಆಯೋಜಿಸಿದ ಬೈಂದೂರು ಉತ್ಸವ ಯಶಸ್ಸನ್ನು ಕಂಡಿದೆ. 2026ರಲ್ಲಿ ಉತ್ಸವವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಿದ್ಧತೆ ನಡೆಸಿದ್ದು ಜನವರಿ 24, 25 ಹಾಗೂ 26ರಂದು ಬೈಂದೂರು ಉತ್ಸವದ ಕಾರ್ಯಕ್ರಮಗಳು ಹಾಗೂ ಅದಕ್ಕೆ ಪೂರಕವಾಗಿ ಮೊದಲೇ ಗ್ರಾಮೋತ್ಸವ ಕಾರ್ಯಕ್ರಮಗಳು ಜರುಗಲಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ತ್ರಾಸಿಯ ಪ್ರೆಸ್ಟೀಜ್ ಸಭಾಭವನದಲ್ಲಿ ಜರುಗಿದ ಬೈಂದೂರು ಉತ್ಸವದ ದಿನಾಂಕ ಘೋಷಣೆ ಹಾಗೂ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕ್ರಮ ಮನೋರಂಜನಾ ಉದ್ದೇಶಕ್ಕೆ ಮಾತ್ರ ಸೀಮಿತವಾಗಿಸದೇ ವಿವಿಧ ಆಯಾಮಗಳಲ್ಲಿ ಅಭಿವೃದ್ಧಿಯ ಮುನ್ನೋಟ, ಜನರ ಆರೋಗ್ಯ ಹಾಗೂ ಜೀವನಮಟ್ಟ ಸುಧಾರಣೆಯ ದೂರದೃಷ್ಠಿತ್ವನ್ನು ಹೊಂದಿದೆ. ಈ ಭಾರಿ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿಯೂ ಗ್ರಾಮೋತ್ಸವಗಳನ್ನು ಆಯೋಜಿಸಲು ಯೋಜನೆ ಹಾಕಿಕೊಂಡಿದ್ದು ಅದರಂತೆ ಪ್ರತಿ ಗ್ರಾಮದಲ್ಲಿ ಕೃಷಿ ಮೇಳ, ಅರಣ್ಯ ಲೋಕ, ಕ್ರೀಡಾ ಮೇಳ, ಉದ್ಯೋಗ ಮೇಳ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜೊಡಿಸಿಕೊಳ್ಳಲಾಗುತ್ತಿದೆ. ಬೈಂದೂರು ಉತ್ಸವ ಎಂಬುದು ಕಾರ್ಯಕ್ರಮಕ್ಕಷ್ಟೇ ಸೀಮಿತವಾಗಿರದೇ ಧೀರ್ಘಕಾದ ಪ್ರಗತಿಯ ಮುನ್ನೋಟವನ್ನು ಹೊಂದಿದೆ ಎಂದರು.

    ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಅವರು ಮಾತನಾಡಿ, ಬೈಂದೂರು ಉತ್ಸವವನ್ನು ಪ್ರಥಮ ಭಾರಿಗೆ ಆಯೋಜಿಸಿದಾಗ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅದೇ ದೃಷ್ಟಿಕೋನದೊಂದಿಗೆ ಮತ್ತಷ್ಟು ಹೊಸ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.
    ಬೈಂದೂರು ಉತ್ಸವ ಸಂಚಾಲಕ ಶ್ರೀಗಣೇಶ್ ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು. ನಾಗರಾಜ ನೈಕಂಬ್ಳಿ ಸಹಕರಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    sixteen − 13 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.