ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮೂರ್ತೆದಾರದ ಹೋರಾಟದ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಕೋಡಿ ಕೊರಗ ಪೂಜಾರಿ ಅವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಹಕಾರ ಚಳುವಳಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ನಿರಂತರ ಸೇವೆಯ ಮೂಲಕ ಜನಜನಿತರಾದ ಕೊರಗ ಪೂಜಾರಿಯವರನ್ನು ವಿಶೇಷವಾಗಿ ಗುರುತಿಸಿ ಬೆಂಗಳೂರಿನಲ್ಲಿ ನ.14ರಂದು ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಸಹಕಾರ ಮಹಾಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.










