ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರಂದು ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದೆವೆ ಎಂದು ಅಭಯಸೇವಾ ಫೌಂಡೇಶನ್ ಅಧ್ಯಕ್ಷ ಯುಬಿ ಉಮೇಶ್ ಶೆಟ್ಟಿ ಹೇಳಿದ್ದಾರೆ.
ಅವರು ಬೆಂಗಳೂರಿನ ಬಂಟರ ಸಂಘದಲ್ಲಿ ನಡೆದ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಜಯಪ್ರಸಾದ್ ಶೆಟ್ಟಿ, ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಿ.ಎಲ್.ಎನ್.ಹೆಗಡೆ, ಅಭಯ ಸೇವಾ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಎಂ.ಬಿ.ಉಮೇಶ್ ಶೆಟ್ಟಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು, ಬಿಜೆಪಿ ಮುಖಂಡರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬಿಜೆಪಿ ಮಹಿಳಾ ಮುಖಂಡರಾದ ಕಾಂತಿ ಶೆಟ್ಟಿ, ಕನ್ನಡ ಪರ ಹೋರಾಟಗಾರ ಶಿವಾನಂದ್ ಶೆಟ್ಟಿ, ಆರ್.ಎಸ್.ಎಸ್.ಮುಖಂಡರಾದ ಸುರೇಶ್, ಸ್ಥಳೀಯ ಮುಖಂಡರಾದ ಸಂತೋಷ್ ಶೆಟ್ಟಿ ಅವರು ಭಾಗಿಯಾಗಿ ಸೇವಾ ಸಂಕಲ್ಪ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದ್ದರು.
ಈ ವೇಳೆ ವರಸಿದ್ದಿ ವಿನಾಯಕನಿಗೆ ರಂಗಪೂಜೆ, ಭಜನೆ ಕುಣಿತ, ಬೀದಿ ನಾಟಕ ಸೇರಿ ವಿವಿಧ ಕಾರ್ಯಕ್ರಮ ನಡೆಯಿತು.ಕಾರ್ಯಕ್ರದಲ್ಲಿ ಎಂ.ಬಿ.ಉಮೇಶ್ ಶೆಟ್ಟಿ ಮಾತನಾಡಿ ಅಭಯ ಸೇವಾ ಫೌಂಡೇಷನ್ ಬಡವರ, ನೊಂದವರ ಸೇವೆ ಮಾಡಲು ಮತ್ತು ಸಂಸ್ಕೃತಿ ಉಳಿಸಲು ಸ್ಥಾಪನೆಯಾಗಿದೆ. ಕಳೆದ ವರ್ಷ ಸೇವಾ ಸಂಕಲ್ಪ ಕಾರ್ಯಕ್ರಮ ಸಾವಿರಾರು ಜನರಿಗೆ ಉಪಯೋಗವಾಗಿದೆ.ಈ ಭಾರಿ ರಾಜಾಜಿಗರದ ಶ್ರೀರಾಮಮಂದಿರ ಆಟದ ಮೈದಾನ ರಾಜಾಜಿನಗರದಲ್ಲಿ ಡಿಸೆಂಬರ್ 19,20,21ರ ಮೂರು ದಿನಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಲ್ಲಿ ಅಂಧಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರಿಗೂ ಕಣ್ಣಿನ ತಪಾಸಣೆ ಮಾಡಲಾಗುತ್ತಿದೆ.ಮಾದಕವಸ್ತುಗಳ ಪಿಡುಗು, ಬಾಲ್ಯ ವಿವಾಹ, ಸಂಚಾರಿ ನಿಯಮ ಪಾಲನೆಗೆ ಬೀದಿ ನಾಟಕದ ಮೂಲಕ ರಾಜಾಜಿನಗರದ ಬೇರೆ ಬೇರೆ ಕಡೆ ಜಾಗೃತಿ ಅಭಿಯಾನ ಏರ್ಪಡಿಸಲಾಗಿದೆ.ಹಾಗೇ ನವ ದುರ್ಗಾದೀಪ ನಮಸ್ಕಾರ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಲಿದ್ದಾರೆ. 108 ಕಳಸಪೂಜೆ, ಹೋಮ, ಹವನ ನವದುರ್ಗೆಯ ಮಹತ್ವ ತಿಳಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.
ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಬಡವರ ಆರೋಗ್ಯ ತಪಾಸಣೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಬ್ಯಾಗ್ ಹಾಗೂ ಕಣ್ಣಿನ ದೋಷ ಇರುವವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗುತ್ತದೆ.
ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ಭರತನಾಟ್ಯ, ಹುಲಿವೇಷ, ಗೀತೆ, ಭಜನೆ, ಯಕ್ಷಗಾನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಅಭಯ ಸೇವಾ ಫೌಂಡೇಷನ್ ಹತ್ತು ಹಲವು ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲ ಸಾಮಾಜಿಕ ಕಾರ್ಯಗಳಿಗೆ ಬೆಂಬಲ ನೀಡಿ,ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಉಮೇಶ್ ಶೆಟ್ಟಿ ಅವರು ಮನವಿ ಮಾಡಿಕೊಂಡಿದ್ದಾರೆ.















