Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ವರಿತ ಲಾಭದ ಕಡೆಗೆ ಹೆಚ್ಚಿನ ಒಲವು ಬೇಡ, ಹಂತ ಹಂತವಾಗಿ ಬೆಳೆಯಿರಿ: ಮಾಲಿನಿ ಸುವರ್ಣ
    ಊರ್ಮನೆ ಸಮಾಚಾರ

    ತ್ವರಿತ ಲಾಭದ ಕಡೆಗೆ ಹೆಚ್ಚಿನ ಒಲವು ಬೇಡ, ಹಂತ ಹಂತವಾಗಿ ಬೆಳೆಯಿರಿ: ಮಾಲಿನಿ ಸುವರ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮಾಭಿವೃದ್ಧಿ ಮತ್ತು ಸ್ವ – ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಹಪ್ಪಳ, ಉಪ್ಪಿನಕಾಯಿ ಹಾಗೂ ವಿವಿಧ ರೀತಿಯ ಮಸಾಲ ಪೌಡರ್ ತಯಾರಿಕೆ ತರಬೇತಿಯ ಉದ್ಘಾಟನಾ ಸಮಾರಂಭವು ಇತ್ತೀಚಿಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಹಾಯಕ ಮಹಾ ಪ್ರಭಂದಕರಾದ ಮಾಲಿನಿ ಸುವರ್ಣ ಅವರು  ಮಾತನಾಡಿ, ಬ್ಯಾಂಕಿನ ಹೆಚ್ಚಿನ ಯೋಜನೆಗಳು ಕಿರು ಉದ್ಯಮಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸುತ್ತದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವುದರ ಬಗೆಗೆ ಪ್ರಯತ್ನ ಮಾಡಿ, ಹಾಗೂ ಉತ್ಪನ್ನವನ್ನು ತಯಾರಿಸುವಾಗ ಗುಣಮಟ್ಟದೊಂದಿಗೆ  ಶುಚಿತ್ವದ ಕಡೆಗೆ ಗಮನ ನೀಡಿ ಎಂದರು. 

    ನಂತರ ನಾವು ತಯಾರಿಸುವ ಉತ್ಪನ್ನಗಳಲ್ಲಿ ಹಿಂದಿನ ಕಾಲದ ಅಡುಗೆಯ ರುಚಿ ಹಾಗು ಉತ್ಪನ್ನದಲ್ಲಿ ವೈವಿಧ್ಯತೆಯ ಜೊತೆಗೆ ಶುಚಿತ್ವದ ಕಡೆಗೆ ಗಮನ ಕೊಟ್ಟರೆ, ಗ್ರಾಹಕರು ತಮ್ಮನ್ನು ಹುಡುಕಿಕೊಂಡು ಬರುವ ಮಟ್ಟಿಗೆ  ಬೆಳೆಯಲು ಸಾಧ್ಯವಾಗುತ್ತದೆ. ಜೊತೆಗೆ ಮುಖ್ಯವಾಗಿ  ಈಗಿನ ಉದ್ಯಮದಾರರು ತ್ವರಿತ ಯಶಸ್ಸಿಗೆ ಹಾಗೂ ಲಾಭಕ್ಕಾಗಿ ಹಾತೊರೆದು, ಉತ್ಪನ್ನದ ಗುಣಮಟ್ಟವನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಉದ್ಯಮದಲ್ಲಿ ಅವಸರ ಬೇಡ, ಹಂತ ಹಂತವಾಗಿ ಮುಂದುವರಿಯಿರಿ, ಮಾರುಕಟ್ಟೆಯ ಸ್ಥಿತಿಯನ್ನು ಅರ್ಥೈಸಿಕೊಳ್ಳಿ. ಗುಣಮಟ್ಟದ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

    ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ಮಾತನಾಡಿ, ಸಂಸ್ಥೆಯು ನೀಡುವ ತರಬೇತಿಯನ್ನು ಶ್ರದ್ಧೆಯಿಂದ ಪಡೆಯಿರಿ. ಆಹಾರ ಉದ್ಯಮ ಎಲ್ಲ ಕಾಲದಲ್ಲೂ ಬೇಡಿಕೆಯನ್ನು ಸೃಷ್ಟಿಸುವ ಉದ್ಯಮವಾಗಿದೆ. ಹಾಗಾಗಿ ಗುಣಮಟ್ಟದೊಂದಿಗೆ ಉದ್ಯಮವನ್ನು ಪ್ರಾರಂಭಿಸಿ, ಯಶಸ್ಸು ಸಾಧಿಸುವುದು ಸುಲಭ ಸಾಧ್ಯವಾಗುತ್ತದೆ. ಗ್ರಾಹಕರ ಮನಸ್ಥಿತಿಯನ್ನು ಅರ್ಥೈಸಿಕೊಂಡು ಉತ್ತಮವಾದ ಮಾತುಕಥೆ, ಹಾಗು ಮಾನವೀಯ ಮೌಲ್ಯದೊಂದಿಗೆ ಉತ್ತಮವಾಗಿ ಉದ್ಯಮವನ್ನು ನಡೆಸಿದಲ್ಲಿ  ಹೆಚ್ಚು ಕಾಲ ಉದ್ಯಮದಲ್ಲಿ ನೆಲೆಯೂರಲು ಸಾಧ್ಯವಾಗುತ್ತದೆ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ  ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.  ಉಪನ್ಯಾಸಕಿ ಚೈತ್ರ ಕೆ.ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು, ಹಿರಿಯ ಕಛೇರಿ ಸಹಾಯಕರಾದರವಿ ಸಾಲ್ಯಾನ್ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 + one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.