ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ.
ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿ ಮತ್ತು ಪ್ರಥಮ್ ಮೋಸ್ಟ್ ಮಸ್ಕುಂಯಲರ್ ಪ್ರಶಸ್ತಿಯನ್ನು ಪಡೆದುಕೊಂಡರು.

16ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.










