ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಐರೋಡಿ ಗ್ರಾಮ ಪಂಚಾಯತ್ ವತಿಯಿಂದ ವಿಕಲಚೇತನರ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಸಕ್ಕು ಅವರ ಅಧ್ಯಕ್ಷತೆಯಲ್ಲಿ ಜರಗಿತು.
ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಧುಸೂದನ್‌ರಾವ್ ಅವರು ವಿಕಲಚೇತನರಿಗೆ ಸರ್ಕಾರದ ವಿವಿಧ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ನಿಂದ ಸಿಗುವ ಸೇವಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್, ಪಿಡಿಓ ಪ್ರಶಾಂತ, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದವರು ಹಾಗೂ ಸಿಬ್ಬಂದಿಯವರು ವಿ.ಆರ್.ಡಬ್ಲೂ ವಿಕಲಚೇತನರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಇದೇ ವೇಳೆ ವಿಕಲಚೇತನರಿಗೆ ಗ್ರಾಮ ಪಂಚಾಯತ್‌ನಿಂದ ಸಹಾಯಧನ ವಿತರಿಸಲಾಯಿತು. ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯಾ ಸ್ವಾಗತಿಸಿ, ನಿರೂಪಿಸಿದರು.










