Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡಿ ಹಬ್ಬ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಕೊಡಿ ಹಬ್ಬ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಭಾನುವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು.

    Click Here

    Call us

    Click Here

    ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಂಡವು.

    ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು.

    ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು ದೇವರಿಗೆ ಪೂಜೆ ಸಲ್ಲಿಸಿದರು. ನವದಂಪತಿ ಕೊಡಿ ಹಬ್ಬದ ದಿನದಂದು ದೇವರ ದರ್ಶನ ಮಾಡಿ ಕಬ್ಬಿನ ಕೊಡಿ (ಜಲ್ಲೆ) ಕೊಂಡೊಯ್ದರೆ ಅವರ ಬಾಳಿನಲ್ಲಿ ಕೊಡಿ ಅರಳುತ್ತದೆ ಎನ್ನುವ ನಂಬಿಕೆ ಇದೆ.

    ವಿವಿಧ ಹರಕೆ ಕಟ್ಟಿಕೊಂಡವರು ಸುತ್ತಕ್ಕಿ ಸೇವೆ ನೀಡುವುದು ವಾಡಿಕೆಯಾಗಿದ್ದು, ದೇವಸ್ಥಾನಕ್ಕೆ ಹೊಂದಿಕೊಂಡಂತೆ ಇರುವ ಸುಮಾರು ನಾಲ್ಕು ಎಕ್ರೆ ವಿಸ್ತೀರ್ಣದ ‘ಕೋಟಿ ತೀರ್ಥ’ ಪುಷ್ಕರಣಿಯ ಸುತ್ತ ಅಪೇಕ್ಷಿತರು ಬಿಳಿಯ ಬಟ್ಟೆಯನ್ನು ಹಾಕಿ ಕುಳಿತುಕೊಳ್ಳುತ್ತಾರೆ. ಭಕ್ತಾಧಿಗಳು ಪುಷ್ಕರಣಿಯಲ್ಲಿ ಮುಳುಗೆದ್ದು ಬಿಳಿ ಬಟ್ಟೆಹಾಸಿನ ಮೇಲೆ ಅಕ್ಕಿಯನ್ನು ಚೆಲ್ಲಿ ಹರಕೆ ಸಲ್ಲಿಸುತ್ತಾರೆ.

    Click here

    Click here

    Click here

    Click Here

    Call us

    Call us

    ಕೊಡಿಹಬ್ಬದ ಅಂಗವಾಗಿ ನಗರದ ಬೀದಿಗಳು ಸಿಂಗಾರಗೊಂಡಿದ್ದು ದೇವಸ್ಥಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಿತ್ಯವೂ ಜರುಗುತ್ತಿದೆ. ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಹಬ್ಬದ ಸಲುವಾಗಿ ಕುಂದಾಪುರ ಡಿ.ಎಸ್ಪಿ ನೇತೃತ್ವದಲ್ಲಿ ರಥೋತ್ಸವದಂದು ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    fourteen − twelve =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.