Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಆಯ್ಕೆಯಾದ 50 ಯುವಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000 ಗಳ ಪ್ರೋತ್ಸಾಹಧನ ನೀಡಲಾಗುವುದು. 18 ರಿಂದ 40 ವರ್ಷ ವಯೋಮಿತಿಯೊಳಗಿನ ಅರ್ಜಿದಾರರು ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.

    ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ  ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬೇಕು.

    ಅರ್ಜಿಗಳೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು ಡಿಸೆಂಬರ್ 24 ರ ಸಂಜೆ 5.30 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002  ಇವರಿಗೆ ಕಳುಹಿಸಬೇಕು.   

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ವೆಬ್‌ಸೈಟ್ www.kannadapustakapradhikara.com ಅಥವಾ ದೂರವಾಣಿ ಸಂಖ್ಯೆ: 080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    10 − 8 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.