ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಇತ್ತೀಚಿಗೆ ನಡೆಯಿತು.
ಅಜೆಕಾರ್ ಪದ್ಮಗೋಪಾಲ್ ಎಜುಕೇಶನಲ್ ಟ್ರಸ್ಟ್ ಹಾಗೂ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿಶೇಷವಾದ ಶಿಕ್ಷಣದ ಕಾಲಘಟ್ಟದಲ್ಲಿ ವಿದ್ಯಾರ್ಜನೆಗೈಯುತ್ತಿರುವ ವಿದ್ಯಾರ್ಥಿಗಳು ವಯೋಸಹಜವಾದ ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕಿ ತಂದೆ ತಾಯಿಯ ಶ್ರಮವನ್ನು ನೆನಪಿಸಿಕೊಂಡು ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನವಿರಲಿ ಎಂದರು.

ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಬ್ರೆಂಡನ್ ಅತಿಥಿಯನ್ನು ಪರಿಚಯಿಸಿದರು. ಕೆ. ಶ್ರೀನಿತಾ ಎಸ್. ಕಾಮತ್ ನಿರೂಪಿಸಿ, ಫಾತಿಮಾ ತೈಭಾ ಸ್ವಾಗತಿಸಿ, ಅದಿತಿ ವಂದಿಸಿದರು.















