ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕ್ಷೇತ್ರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ ಆರೋಪಿಸಿದ್ದಾರೆ.
ಬೈಂದೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೇಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಇವತ್ತು ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳಿಗೆ ಕುಂದುಕೊರತೆಗಳಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ಸರಕಾರಿ ಉಪ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ, ಸಿಬ್ಬಂದಿ ಮತ್ತು ವೈದ್ಯರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ.

ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಲು & ಮೂಲಭೂತ ಸೌಕರ್ಯ ಒದಗಿಸಲು ಆಗ್ರಹ:
- ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ ದರ್ಜೆಗೆ ಏರಿಸುವುದು.
- ತಾಲೂಕು ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ವಾಸ್ತವ್ಯವನ್ನು ಮಾಡುವಂತದ್ದು ಮತ್ತು ಸಕಾಲದಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯ ಇರುವಂತೆ ಮಾಡುವುದು.
- ರಾತ್ರಿ ವೇಳೆಯಲ್ಲಿ ಅಪಘಾತಕ್ಕೆ ಒಳಪಟ್ಟು ಆಸ್ಪತ್ರೆಗೆ ಬಂದರೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಇಲ್ಲದಿರುವುದು ಆ ಸಂದರ್ಭದಲ್ಲಿ ವೈದ್ಯರು ಕೂಡ ಸಿಗದೇ ಇರುವಂತದ್ದು.
- ಬೈಂದೂರು ತಾಲೂಕು ಸಮುದಾಯ ಆರೋಗ್ಯ ಕೇಂದ್ರ ಅವ್ಯವಸ್ಥೆಗೆ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಕೊರತೆ, ನಿರ್ವಹಣೆಯ ಕೊರತೆ, ಮತ್ತು ಅಗತ್ಯ ಸೌಲಭ್ಯಗಳಿಲ್ಲದ ಶಸ್ತ್ರಚಿಕಿತ್ಸಾ ಕೊಠಡಿ, ತುರ್ತು ನಿಗಾ ಘಟಕಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ. ಬಳಕೆಯಲ್ಲಿಲ್ಲದಿರುವುದು ಇವು ಮುಖ್ಯ ಕಾರಣಗಳು. ಇದರಿಂದಾಗಿ, ಉಚಿತ ವೈದ್ಯಕೀಯ ಸೇವೆಗಳನ್ನು ಪಡೆಯುವಲ್ಲಿ ನಾಗರಿಕರು ತೊಂದರೆ ಎದುರಿಸುತ್ತಾರೆ, ಇದರಿಂದ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೇಲೆ ಅವಲಂಬನೆಯನ್ನು ಹೆಚ್ಚಿಸುತ್ತಿದೆ.
- ಕಟ್ಟಡಗಳು ಮತ್ತು ವೈದ್ಯಕೀಯ ಸೇವೆಗಳಿಗೆ ಅಗತ್ಯವಾದ ಶಸ್ತ್ರಚಿಕಿತ್ಸಾ ಕೊಠಡಿಗಳು ಮತ್ತು ತುರ್ತು ನಿಗಾ ಘಟಕಗಳು ಬಳಕೆಯಲ್ಲಿಲ್ಲದಿರುವುದು.
- ವೈದ್ಯರು ಮತ್ತು ಸಿಬ್ಬಂದಿ ಕೊರತೆ ಮೂಲಸೌಕರ್ಯ ಸರಿಯಿಲ್ಲದ ಕಾರಣ ವೈದ್ಯರು ಅಲ್ಲಿಗೆ ಬರಲು ಒಪ್ಪುತ್ತಿಲ್ಲ. ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ವೈದ್ಯರು ರಾತ್ರಿ ವೇಳೆಯಲ್ಲಿ ಸರಿಯಾಗಿ ಸೇವೆ ಸಲ್ಲಿಸುವುದಿಲ್ಲ ಎಂಬ ಆಪಾದನೆ ಮಾಡುತ್ತಿರುವ ರೋಗಿಗಳು.
- ಆಸ್ಪತ್ರೆಯ ಆಂತರಿಕ ಆಡಳಿತ ಸರಿಯಾಗಿಲ್ಲ, ಕೆಲವೊಂದು ಸಂದರ್ಭಗಳಲ್ಲಿ ಹಿರಿಯ ವೈದ್ಯರ ವರ್ತನೆ ಕೂಡ ಹೊಸ ವೈದ್ಯರು ಕಾರ್ಯನಿರ್ವಹಿಸಲು ಅಡ್ಡಿಯಾಗುತ್ತಿದೆ. ಉಚಿತ ಔಷಧಿ, ಮತ್ತು ಬೆಡ್‌ಗಳ ಕೊರತೆಯೂ ಸಮಸ್ಯೆಯಾಗಿದೆ. ಇದನ್ನ ಸರಿಪಡಿಸಲು ರಾಜ್ಯ ಸರಕಾರ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಆಧುನಿಕ ವೈದ್ಯಕೀಯ ಉಪಕರಣಗಳ ಅಳವಡಿಕೆ.
- ಗ್ರಾಮೀಣ ಭಾಗದಲ್ಲೂ ತಜ್ಞವೈದ್ಯರ ಸೇವೆ ಲಭ್ಯವಾಗುವಂತೆ ಟೆಲಿಮೆಡಿಸಿನ್ ಜಾಲವನ್ನು ಬಲಪಡಿಸುವುದು.
- ಗ್ರಾಮೀಣ ಪ್ರದೇಶದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವುದು.
- ಆಸ್ಪತ್ರೆಗಳಲ್ಲಿ ಲ್ಯಾಬ್ ನಿರ್ವಹಣೆಗೆ ತಾಂತ್ರಿಕ ತಜ್ಞರನ್ನು ನೇಮಿಸುವುದು ಮತ್ತು ಅತ್ಯಾಧುನಿಕ ತುರ್ತು ನಿಗಾ ಘಟಕಗಳ ವ್ಯವಸ್ಥೆ ಮಾಡುವುದು.
- ಗ್ರಾಮೀಣ ಪ್ರದೇಶಗಳಲ್ಲಿ ರಕ್ತ ನಿಧಿಗಳನ್ನು ಸ್ಥಾಪಿಸುವುದು.
- ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ‘ಹೆಲ್ತ್ ಕಾರ್ಡ್’ ನೀಡಿ, ವೈದ್ಯಕೀಯ ಸೇವೆಗಳನ್ನು ಸುಲಭವಾಗಿಸುವುದು.
- ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಮುತುವರ್ಜಿಯಿಂದಾಗಿ ಈಗಾಗಲೇ ಪಟ್ಟಣ ಪಂಚಾಯತ್ ನ ಎರಡು ಗ್ರಾಮಗಳಲ್ಲಿ ನಮ್ಮ ಕ್ಲಿನಿಕ್ ನ ಸೇವೆಗಳು ಪ್ರಾರಂಭವಾಗಿದೆ, ಅಲ್ಲದೆ ವಿಶೇಷವಾಗಿ ದಾನಿಗಳ ನೆರವಿನಿಂದ ಡಯಾಲಿಸಿಸ್ ಸೆಂಟರ್ ಅನ್ನು ಕೂಡ ಪ್ರಾರಂಭ ಮಾಡಿದ್ದಾರೆ.
- ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಗಮನಹರಿಸಬೇಕು… ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ವಿರುದ್ದ ಬೈಂದೂರು ತಾಲೂಕು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಉಗ್ರವಾದ ಹೋರಾಟಕ್ಕೆ ಮುಂದಾಗುವುದು ಗ್ಯಾರಂಟಿ.
ಸುದ್ದಿಗೊಷ್ಠಿಯಲ್ಲಿ ಬೈಂದೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಜಗದೀಶ್ ಆಲoದೂರು, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಆಜ್ರಿ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಂದ್ರ ಬಿಜೂರು ಉಪಸ್ಥಿತರಿದ್ದರು.










