Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಹಳೆ ವಿದ್ಯಾರ್ಥಿಗಳು ಶಾಲೆಯ ಪ್ರತಿಯೊಂದು ಆಗು ಹೋಗುಗಳಿಗೆ ಸ್ಪಂದಿಸಬೇಕು,  ಶಾಲೆಯೊಂದಿಗೆ ಗಟ್ಟಿಯಾಗಿ ನಿಲ್ಲಬೇಕು. ಹಳೆ ವಿದ್ಯಾರ್ಥಿಗಳು ಶಾಲೆಯೊಂದಿಗೆ ಉತ್ತಮ ಒಡನಾಟ ಇಟ್ಟಕೊಂಡರೆ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಆಧುನೀಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಗ್ರಾಮೀಣ ಪ್ರದೇಶದ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡಬೇಕು ಎಂದು ಕೆನರಾ ಬ್ಯಾಂಕಿನ ನಿವೃತ್ತ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಭಾನುವಾರ ನಡೆದ ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮುಖ್ಯ ಅತಿಥಿಯಾಗಿದ್ದ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ವ್ಯವಸ್ಥಾಪಕ ವಾಸು ದೇವಾಡಿಗ ಮಾತನಾಡಿ, ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ವಿಶ್ವಾಸದಿಂದ ಸಾಧಿಸುವ ಛಲದೊಂದಿಗೆ ಉತ್ತಮ ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಾವಿತ್ರಿ ಎಸ್. ಶುಭಾಶಂಸನೆಗೈದರು. ಭಾರತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

    ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ಜಿ. ವಿಶ್ವನಾಥ ಭಟ್, ನಿವೃತ್ತ ಶಿಕ್ಷಕ ಕೆ. ಮಹಾಬಲ ಆಚಾರ್ಯ, ಸಾಧಕ ವಿದ್ಯಾರ್ಥಿಗಳಾದ ಸುಶ್ಮಿತಾ ಎಸ್. ಗಾಣಿಗ, ಮನಾಲಿ ಎಂ., ಶ್ರಾವ್ಯ ಮತ್ತು ನಿಸರ್ಗ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

    ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಿಥುನ್ ದೇವಾಡಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿ. ಸುದನೇಶ ಶ್ಯಾನುಭಾಗ್ ವರದಿ ವಾಚಿಸಿದರು. ಬಿ. ಪ್ರಕಾಶ ಶೆಣೈ, ಸಕು ಉದಯ, ಮಹಮ್ಮದ್ ಹುಸೇನ್, ಸೌಮ್ಯ ಗಾಣಿಗ, ಮಮತಾ ಪೂಜಾರಿ, ದೇವದಾಸ ಸಮ್ಮಾನಿತರನ್ನು ಪರಿಚಯಿಸಿದರು. ನಾಗರಾಜ ಕಲೈಕಾರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಬಿ. ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಭಾಸ್ಕರ ಎಚ್.ಜಿ. ವಂದಿಸಿದರು.

    Click here

    Click here

    Click here

    Click Here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    fourteen − 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.