ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಗಣೇಶ್ ದೇವಾಡಿಗ ಉಪ್ಪುಂದ, ಶ್ರೀ ಶಾರದಾಂಬ ಟ್ರಸ್ಟ್ ರಿ. ತೊಂಡೆಮಕ್ಕಿ ಇವರಿಂದ ಜಾನಪದ ಕಲಾ ಪ್ರಕಾರ ದಡಿಯಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನ ಸಿಬ್ಬಂದಿಗಳು, ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಮುರಳೀಧರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.










