ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜೂಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಾದ ರಾಕೇಶ್ (24), ಮ್ಯಾಕ್ಸಿ ರೋಶನ್ (39), ಸತೀಶ್ (37) ಎಂಬುವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ ಹಣ 4,450/- ರೂಪಾಯಿ, ಇಸ್ಪೀಟ್ ಎಲೆಗಳು 52, ಹಳೆಯ ನ್ಯೂಸ್ ಪೇಪರ್ ಸ್ವಾದೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










