ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯಪಾಲರನ್ನು ದೇಗುಲದ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಮಾಜಿ ಶಾಸಕ ಬಿ.ಎಂ. ಸುಕುಮಾರ್‌ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.

ಅರ್ಚಕರಾದ ಕೆ.ಎನ್. ನರಸಿಂಹ ಅಡಿಗ, ಶ್ರೀಧರ ಅಡಿಗ, ಸುಬ್ರಹ್ಮಣ್ಯ ಅಡಿಗ, ಗೋವಿಂದ ಅಡಿಗ, ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.










