Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ: ಡಾ. ತಿಪ್ಪೇಸ್ವಾಮಿ
    ಉಡುಪಿ ಜಿಲ್ಲೆ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಿ: ಡಾ. ತಿಪ್ಪೇಸ್ವಾಮಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಗಂಭೀರವಾಗಿ ಪರಿಗಣಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಬೇಕು. ಸಭೆಗಳ ವರದಿಯನ್ನು ಒಂದು ವಾರದೊಳಗೆ ಸಂಬಂಧಪಟ್ಟ ಇಲಾಖೆಗಳಿಗೆ ನೀಡಬೇಕು. ತಿಂಗಳಲ್ಲಿ ಒಂದು ದಿನ ಮಕ್ಕಳಿಗಾಗಿ ಮೀಸಲಿಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ತೆಗೆದುಕೊಂಡ ಕ್ರಮಗಳನ್ನು ನಿಯಮಿತವಾಗಿ ಆಯೋಗಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಕ್ಕಳು ಮತ್ತು ಹದಿಹರೆಯದವರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 2025 ಏಪ್ರಿಲ್ ವರೆಗೆ ಒಟ್ಟು 660 ಕಡೆಗಳಲ್ಲಿ ತಪಾಸಣೆ ನಡೆಸಿ 1 ಬಾಲ ಕಾರ್ಮಿಕ 3 ಕಿಶೋರ ಕಾರ್ಮಿಕ ಒಟ್ಟು 4 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ನ್ಯಾಯಾಲಯದಲ್ಲಿ ಒಟ್ಟು 5 ಮೊಕದ್ದಮೆಗಳನ್ನು ಹೂಡಲಾಗಿದೆ. 3 ಪ್ರಕರಣಗಳಲ್ಲಿ ದಂಡ ವಿಧಿಸಿ 32,000 ರೂ ಮೊತ್ತದ ದಂಡ  ಮತ್ತು  20,000 ಕಾರ್ಪಸ್ ನಿಧಿ ವಸೂಲು ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ  ಒಟ್ಟು 9 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ ಎಂದರು. 

    ಬಾಲ ಹಾಗೂ ಕಿಶೋರ ಕಾರ್ಮಿಕರ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಪ್ಪಿಸಬೇಕು.  ಇದಕ್ಕಾಗಿ ತಪಾಸಣೆಗಳನ್ನು ಹೆಚ್ಚಿಸಬೇಕು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಸರಿಯಾದ ದತ್ತಾಂಶಗಳನ್ನು ಸಂಗ್ರಹಿಸಬೇಕು. ಕಾಯ್ದೆ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತಂದಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ಅಧಿಕಾರಿಗಳು ಕೇವಲ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡುವುದನ್ನು ಗುರಿಯಾಗಿಸದೆ ಬಾಲ ಕಾರ್ಮಿಕರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಆ ಕುಟುಂಬದ ಸಮಗ್ರ ಪುನರ್ವಸತಿಗೆ ಆದ್ಯತೆ ನೀಡಿ ಅವರ ಸಬಲೀಕರಣಕ್ಕೆ ಒತ್ತು ನೀಡಬೇಕು. ಸದೃಢ ಕುಟುಂಬದಲ್ಲಿ ಮಕ್ಕಳ ರಕ್ಷಣೆ ಮತ್ತು ಪೋಷಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಂಡು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯು ಇತರರಿಗೆ ಮಾದರಿಯಾಗಬೇಕು ಎಂದರು.

    ರಕ್ಷಿಸಲಾದ ಬಾಲ ಹಾಗೂ ಕಿಶೋರ  ಕಾರ್ಮಿಕ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಬೇಕು. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು ಮಕ್ಕಳ ನಾಪತ್ತೆ ಪ್ರಕರಣಗಳನ್ನು ಶಿಕ್ಷಣ ಮತ್ತು ಕಾರ್ಮಿಕ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಮಕ್ಕಳಿಗೆ ನ್ಯಾಯ ಒದಗಿಸಬೇಕು ಎಂದರು.

    ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಮುಕ್ತ ಗ್ರಾಮಗಳನ್ನು ಗುರುತಿಸಿ ಅಂತಹ ಗ್ರಾಮಗಳಿಗೆ ಪ್ರಮಾಣ ಪತ್ರ ನೀಡಬೇಕು. ಶಾಲೆ-ಕಾಲೇಜುಗಳಲ್ಲಿ ಚರ್ಚಾ ಕೂಟ, ಸ್ಪರ್ಧೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ಮನೋರಂಜನಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮಕ್ಕಳ ಮಾಹಿತಿ ಕಲೆ ಹಾಕಿ ಮಕ್ಕಳು ಕಾನೂನು ರೀತ್ಯಾ ನಟಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕೆಲಸ  ಮಾಡುತ್ತಿರುವ  ವಲಸೆ ಕಾರ್ಮಿಕರ ಮಕ್ಕಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಮಕ್ಕಳ ಹಕ್ಕುಗಳ ಮಾಸಾಚರಣೆ ಅಭಿಯಾನಗಳನ್ನು ಕೈಗೊಳ್ಳಬೇಕು. ವಿವಿಧ ಇಲಾಖೆಗಳ ಜೊತೆ ಸೇರಿ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು ಎಂದರು.

    Click here

    Click here

    Click here

    Click Here

    Call us

    Call us

    ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕಿ ಅಮೃತ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ತಾಲೂಕು ಮಟ್ಟದ ಕಾರ್ಮಿಕ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.