ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರ ಮತ್ತು ಪಾಲಕರ ಸಭೆಯನ್ನು ನಡೆಸಿ, ವಿದ್ಯಾರ್ಥಿಗಳ ಅಧ್ಯಯನದ ವಿಚಾರಗಳನ್ನು ಚರ್ಚಿಸಲಾಯಿತು.
ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಮಾತನಾಡಿ, ಮಕ್ಕಳ ಸಂಜೆಯ ಅಧ್ಯಯನ ಸಮಯದಲ್ಲೂ ಪಾಠ ನಡೆಸಿದರೆ, ಮಕ್ಕಳಿಗೆ ಸ್ವತಃ ಅಧ್ಯಯನಕ್ಕೆ ಹಿಡಿತ ಕಡಿಮೆಯಾಗುತ್ತದೆ. ಆದ್ದರಿಂದ ನಾವು ಮಕ್ಕಳನ್ನು ಸ್ವತಃ ಓದುವುದಕ್ಕೂ ಆದ್ಯತೆ ನೀಡುತ್ತಿದ್ದೇವೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿದ್ದೇವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಬೇಸ್ ಸಂಸ್ಥೆಯವರಿಂದ ತರಗತಿಗಳನ್ನು ನಡೆಸುತ್ತಿದ್ದು, ಅವಶ್ಯವಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಎಂದು ತಿಳಿಸುತ್ತಾ ಮಕ್ಕಳ ಸುರಕ್ಷತೆಯ ಬಗ್ಗೆ ಕೆಲವಷ್ಟು ಮಾಹಿತಿಗಳನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ, ಶಿಕ್ಷಣ ಸಂಯೋಜಕರಾದ ಸವಿತಾ ಭಟ್, ಶ್ರೀಮಧು ಕೆ. ಎಲ್, ಲತಾ ದೇವಾಡಿಗ, ವಸತಿ ನಿಲಯದ ಪಾಲಕರಾದ ರಾಜೇಶ್ ಮತ್ತು ಪಲ್ಲವಿ, ಪೋಷಕ- ಶಿಕ್ಷಕ – ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಶಶಿಕಲಾ ಶೆಟ್ಟಿ ನಿರ್ವಹಿಸಿದರು.










