ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದಕನ್ನು ಕಾಣುತ್ತಿದ್ದಾರೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು.
ಅವರು ಭಾನುವಾರ ಕೋಟದ ಮಣೂರು ಶ್ರೀ ರಾಜಲಕ್ಷ್ಮಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೋಟ ವಲಯ ಹಮ್ಮಿಕೊಂಡ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕೋಟ ವಲಯಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನೆಯಿಂದಲೇ ಹೊರಬಾರದಿದ್ದ ಕಾಲಘಟ್ಟವೊಂದಿತ್ತು ಆದರೆ ಶ್ರೀ ಕ್ಷೇತ್ರದ ಖಾವಂದರ ಗ್ರಾಮಾಭಿವೃದ್ಧಿ ಯೋಜನೆಯಿಂದ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಿದೆ ಎಂದರಲ್ಲದೆ ಇಂತಹ ಯೋಜನೆಗಳು ಮಹಿಳೆಯರ ಉನ್ನತಿಗೆ ಮತ್ತಷ್ಟು ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭಹಾರೈಸಿದರು.

ಇದೇ ವೇಳೆ ಕೋಟ ವಲಯದ ವಿವಿಧ ಒಕ್ಕೂಟಗಳ ಅಧ್ಯಕ್ಷರಾದ ಗೀತಾ, ಸುಮತಿ, ರೇವತಿ ಶೆಟ್ಟಿ, ಮಾಲಿನಿ, ಲಲಿತಾ ಭಾಸ್ಕರ್, ಸವಿತಾ, ಜಯಂತಿ ಒಟ್ಟು ಎಂಟು ಒಕ್ಕೂಟಗಳಿಂದ ಅಧಿಕಾರ ಹಸ್ತಾಂತರಿಸಿಕೊಳ್ಳಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜನಸೇವಾ ಟ್ರಸ್ಟ ಮೂಡುಗಿಳಿಯಾರು ಅಧ್ಯಕ್ಷ ವಸಂತ ಗಿಳಿಯಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ನಾಗರಾಜ ಶೆಟ್ಟಿ , ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೋಟ ವಲಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಶೌರ್ಯ ಘಟಕದ ಕೋಟ ವಲಯ ಅಧ್ಯಕ್ಷ ರವೀಂದ್ರ ಆಚಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯ ಕೋಟ ವಲಯಾಧ್ಯಕ್ಷ ದಿನೇಶ್, ಸ್ಥಳೀಯ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ಧರ್ಮಸ್ಥಳ ಗ್ರಾ. ಯೋಜನೆಯ ಮೇಲ್ವಿಚಾರಕ ರಮೇಶ್ ಪಿ.ಕೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.
















