ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆಲವರು ವೃತ್ತಿಯಿಂದ ನಿವೃತ್ತಿ ಹೊಂದಿದರೂ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಆನಂದ ಜೆ. ಹೇಳಿದರು.
ಅವರು ಇಲ್ಲಿನ ಪುರಸಭೆಯಲ್ಲಿ ಲೆಕ್ಕಿಗರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀಪತಿ ಕಲ್ಕೂರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಪುರಸಭೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಫಲಪುಷ್ಪ ಹಾಗೂ ಸ್ಮರಣಿಕೆಗಳನ್ನು ನೀಡಿ ನೆನಪುಗಳನ್ನು ಹಂಚಿಕೊಂಡರು. ಮಾಜಿ ಪುರಸಭಾ ಸದಸ್ಯರು, ಗುತ್ತಿಗೆದಾರರು ಭಾಗವಹಿಸಿ ನಿವೃತ್ತರಿಗೆ ನೆನಪಿನ ಕಾಣಿಕೆ ನೀಡಿ ಅವರ ವಿಶ್ರಾಂತ ಜೀವನಕ್ಕೆ ಶುಭ ಹಾರೈಸಿದರು.
ಕಛೇರಿ ವ್ಯವಸ್ಥಾಪಕ ಜಿ. ಸೂರ್ಯಕಾಂತ ಖಾರ್ವಿ ನಿರೂಪಿಸಿ, ಸಹಾಯಕ ಗಣೇಶ್ ಪಿ. ವಂದಿಸಿದರು. ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಕಲ್ಕೂರ್ ಅವರಿಗೆ ಶುಭಕೋರಿದರು.









