Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಣೆಯಾಗಿದ್ದ 10 ವರ್ಷದ ಬಾಲಕನ್ನು ಪತ್ತೆ ಮಾಡಿದ ಗಂಗೊಳ್ಳಿ ಪೊಲೀಸ್‌ ಠಾಣೆಯ ಪಿಎಸೈ ಪವನ್‌ ನಾಯಕ್‌
    ಊರ್ಮನೆ ಸಮಾಚಾರ

    ಕಾಣೆಯಾಗಿದ್ದ 10 ವರ್ಷದ ಬಾಲಕನ್ನು ಪತ್ತೆ ಮಾಡಿದ ಗಂಗೊಳ್ಳಿ ಪೊಲೀಸ್‌ ಠಾಣೆಯ ಪಿಎಸೈ ಪವನ್‌ ನಾಯಕ್‌

    Updated:08/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಆಟವಾಡಲು ತೆರಳಿದ್ದ ಬಾಲಕ ಮನೆಗೆ ಹಿಂದಿರುಗದೇ ನಾಪತ್ತೆಯಾಗಿದ್ದ ಘಟನೆ ಬುಧವಾರ ಸಂಜೆ ನಡೆದಿದ್ದು, ವಿಚಾರ ಗಮನಕ್ಕೆ ಬರುತ್ತಿದ್ದಂತೆ ಗಂಗೊಳ್ಳಿ ಪಿಎಸ್‌ಐ ಪವನ್‌ ನಾಯಕ್‌ ನೇತೃತ್ವದ ಪೊಲೀಸರ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ ಬಾಲಕನ್ನು ಪತ್ತೆ ಮಾಡಿದೆ. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    Click Here

    Call us

    Click Here

    ಆಗಿದ್ದಿಷ್ಟು:
    ಸರಕಾರಿ ಶಾಲೆಯೊಂದರಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕನೋರ್ವ ಶಾಲೆ ಮಗಿಸಿ ಮನೆಗೆ ಹಿಂದಿರುಗಿದ್ದ. ಅಲ್ಲಿಂದ ಬೆಣ್ಗೇರೆ ನಾಗ ದೇವಸ್ಥಾನದ ಬಳಿ ಸ್ನೇಹಿತರೊಂದಿಗೆ ಆಡವಾಡಲು ತೆರಳಿದ್ದ. ಸಂಜೆ 06:30ರ ತನಕವೂ ಬಾಲಕ ಅದೇ ಪರಿಸರದಲ್ಲಿ ಆಟವಾಡುತ್ತಿರುವುದನ್ನು ಆತನ ಪಕ್ಕದ ಮನೆಯವರೂ ಗಮನಿಸಿದ್ದರು. ಆದರೆ ರಾತ್ರಿ 07:00 ಗಂಟೆ ಆದರೂ ಆತ ಮನೆಗೆ ಹಿಂದಿರುಗದೇ ಇರುವುದನ್ನು ಗಮನಿಸಿದ ಬಾಲಕನ ಮಾವ ಪಕ್ಕದ ಮನೆ ಹಾಗೂ ಸುತ್ತಮುತ್ತಲು ವಿಚಾರಿಸಿದ್ದಾರೆ. ಎಲ್ಲಿಯೂ ಬಾಲಕನ ಸುಳಿವು ಸಿಗದಿದ್ದಾಗ ಊರವರು ಸೇರಿ ಹುಡುಕಾಟ ನಡೆಸಿದ್ದಾರೆ. ಬಾಲಕ ಆಡವಾಡುತ್ತಿದ್ದ ಸುತ್ತಲಿನ ಪರಿಸರದಲ್ಲಿ ನೂರಾರು ಮಂದಿ ಸ್ಥಳೀಯರು ಜಮಾಯಿಸಿ ಹುಡುಕಾಟ ನಡೆಸಿದರೂ ಬಾಲಕ ಪತ್ತೆಯಾಗಿರಲಿಲ್ಲ.

    ಘಟನೆಯ ಬಗ್ಗೆ ಮಾಹಿತಿ ಪಡೆದ ಗಂಗೊಳ್ಳಿ ಪೊಲೀಸ್‌ ಠಾಣೆಯ ಪಿಎಸ್‌ಐ ಪವನ್‌ ನಾಯಕ್‌ ಹಾಗೂ ಅವರ ತಂಡ ರಾತ್ರಿ ಮತ್ತೆ ಹುಡುಕಾಟ ಮುಂದುವರಿಸಿದರು. ಪವನ್‌ ನಾಯಕ್‌ ಅವರು ಬಾಲಕನ ಮನೆಯಿಂದ ಸುಮಾರು 250 ಮೀಟರ್‌ ದೂರದಲ್ಲಿರುವ ಬಂಡೆ ಕಲ್ಲಿನ ಕೆಳಗಡೆ ಪೊಟರೆಯಲ್ಲಿ ಮಲಗಿಕೊಂಡಿದ್ದ ಬಾಲಕನನ್ನು ಪತ್ತೆ ಹಚ್ಚಿ , ತಕ್ಷಣ ಆತನನ್ನು ರಕ್ಷಸಿ ಕುಟುಂಬಿಕರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಕ್ಷೀಪ್ರ ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬಾಲಕನ ತಂದೆ ತಾಯಿ ಮೃತರಾಗಿದ್ದ ಸಂಬಂಧಿಕರು ಪಾಲನೆ ಮಾಡುತ್ತಿದ್ದಾರೆ. ಆಡವಾಡುತ್ತಿದ್ದ ಸಂದರ್ಭ ಚಿಕ್ಕ ಗಾಯವಾಗಿದ್ದು ಮನೆಯಲ್ಲಿ ಬೈಯಬಹುದು ಎಂಬ ಕಾರಣಕ್ಕೆ ಹೆದರಿ ಅಡಗಿ ಕುಳಿತಿದ್ದ ಎನ್ನಲಾಗಿದೆ. ಬುಧವಾರ ಸಂಜೆ ಗುಜ್ಜಾಡಿ ಪರಿಸರದಲ್ಲಿ ಕೆಲ ಗಂಟೆಗಳ ಕಾಲ ಆತಂಕ ಸೃಷ್ಟಿಸಿದ್ದ ಪ್ರಕರಣ ಸುಖಾಂತ್ಯ ಕಂಡಂತಾಗಿದೆ.

    ಗಂಗೊಳ್ಳಿ ಪೊಲೀಸ್‌ ಠಾಣಾಧಿಕಾರಿ ಪವನ್‌ ನಾಯಕ್ ರವರು ಹೆಚ್‌ ಡಿ ಕುಲಕರ್ಣಿ, ಮಾನ್ಯ ಪೋಲೀಸ್ ಉಪಾಧೀಕ್ಷಕರು ಕುಂದಾಪುರ ಹಾಗೂ ಶಿವಕುಮಾರ್‌ ಬಿ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರುರವರ ನಿರ್ದೇಶನದಂತೆ ಪವನ್‌ ನಾಯಕ್ (ಕಾ & ಸು), ಸುದರ್ಶನ್‌ ಬಿ ಎನ್ (ತನಿಖೆ) ಹಾಗೂ ಸಿಬ್ಬಂದಿಗಳಾದ ಕೃಷ್ಣ ದೇವಾಡಿಗ, ರಾಘವೇಂದ್ರ ಶೆಟ್ಟಿ, ಚಂದ್ರ ಪಿ, ರಾಘವೇಂದ್ರ ಪೂಜಾರಿ, ಸಂದೀಪ್‌ ಕುರಾಣಿ, ರಿತೇಶ್‌ ಶೆಟ್ಟಿ, ಮಾಳಿಂಗರಾಯ, ನಿತೀನ್‌, ಶರಣಪ್ಪ, ಮಲ್ಲಪ್ಪ, ಮಾರುತಿ ನಾಯ್ಕ, ರವಿಚಂದ್ರ ಅವರು

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    six − four =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.