Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಪರಿಸರ ಹಾಗೂ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಪರಿಸರ ಹಾಗೂ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ

    Updated:08/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಯಾವುದೇ ವೃತ್ತಿಯಾದರೂ ಅದರ ಬಗ್ಗೆ ಗೌರವ ಇರಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಬೇಕು. ಪರಿಸರ ರಕ್ಷಣೆ ಮುಖ್ಯವಾಗಿದ್ದು, ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ಕಾರ್ಯದಲ್ಲಿ ಮಕ್ಕಳು ಕೈಜೋಡಿಸಿದರೆ ದೇಶ ಉದ್ಧಾರವಾಗಲು ಸಾಧ್ಯ ಎಂದು ರೋಟರಿ ಡಿಸ್ಟ್ರಿಕ್ ಚೇರ್ಮನ್ ವೊಕೇಶನಲ್ ಸರ್ವಿಸ್ ಪ್ರಭಾಕರ ಕುಂಭಾಶಿ ಹೇಳಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಶಾಲೆಯ ದಿ. ಕೊಂಚಾಡಿ ಗಣಪತಿ ಶೆಣೈ ವೇದಿಕೆಯಲ್ಲಿ ಜರಗಿದ ಪರಿಸರ ಹಾಗೂ ಕಡಲಾಮೆ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ ಕಾರ್ಯಾಗಾರ ಮತ್ತು ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

    ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಸರಕಾರಿ ಶಾಲೆ ಎಂಬ ಕೀಳರಿಮೆ ಇರಬಾರದು. ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಸಮಾಜದ ಕಟ್ಟ ಕಡೆಯ ಸಹಸ್ರಾರು ಮಂದಿ ಉತ್ತಮ ಸ್ಥಾನಮಾನ ಗಳಿಸಿದ್ದಾರೆ. ಸರಕಾರಿ ಶಾಲೆಗಳಲ್ಲಿ ಶುಚಿತ್ವ, ಪಾಠೇತರ ಚಟುವಟಿಕೆಗಳಿಗೆ ಪ್ರೋತ್ಸಾಹ, ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುತ್ತಿದ್ದು, ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದಕ್ಕೊಂದು ಉತ್ತಮ ನಿದರ್ಶನ ಎಂದು ಅವರು ಶ್ಲಾಘಿಸಿದರು.

    ರೋಟರಿ ವಲಯ-1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ನಾಗರಾಜ್ ಖಾರ್ವಿ ಮಾಹಿತಿ ನೀಡಿದರು.

    ಇದೇ ಸಂದರ್ಭ ಹಲವಾರು ವರ್ಷಗಳಿಂದ ಸಾಂಪ್ರದಾಯಿಕ ಜೀವನಾಧಾರಿತ ವೃತ್ತಿ ನೆಚ್ಚಿಕೊಂಡು ಜೀವನ ಸಾಗಿಸುತ್ತಿರುವ ಅಶೋಕ ಭಂಡಾರಿ ತ್ರಾಸಿ, ಶಂಕರ ಪೂಜಾರಿ ಗಂಗೊಳ್ಳಿ, ಅನಿಲ್ ಹೆಮ್ಮಾಡಿ ಮತ್ತು ಖಲೀಫೆ ಅಬ್ದುಲ್ ಮಜೀದ್ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Click Here

    Call us

    Call us

    ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ, ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಉಷಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಶಿಕ್ಷಕಿ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ರಾಮನಾಥ ಚಿತ್ತಾಲ್ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    seventeen − seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.