ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿಯ ಶಿಕ್ಷಕರ ಮತ್ತು ಪಾಲಕರ ಸಭೆಯನ್ನು ನಡೆಸಿ, ವಿದ್ಯಾರ್ಥಿಗಳ ಅಧ್ಯಯನದ ವಿಚಾರಗಳನ್ನು ಚರ್ಚಿಸಲಾಯಿತು.
ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣ ಹುಳ್ಳಾಲ ಎಸ್.ಜಿಎಫ್‌ಐ ಬಗ್ಗೆ ಮಾಹಿತಿ ನೀಡುತ್ತಾ, ನಮ್ಮ ಶಾಲೆಯ ಮಕ್ಕಳ ರಾಜ್ಯ- ರಾಷ್ಟ್ರಮಟ್ಟದ ಕ್ರೀಡಾ ಸಾಧನೆಯನ್ನು ಪೋಷಕರಿಗೆ ತಿಳಿಸಿದರು.

ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಮಾತನಾಡುತ್ತಾ ಮಕ್ಕಳ ನೈಜ ಬೆಳವಣಿಗೆ ಹಂತ ಹಂತವಾಗಿ ಸಾಗುತ್ತಿದ್ದು, ಅವರ ಅಧ್ಯಯನದಲ್ಲಿ ಪೋಷಕರ ಪಾಲೂ ಮಹತ್ತ್ವದ್ದಾಗಿದ್ದು, ಪೋಷಕರೂ ಸಹ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಾಗುತ್ತದೆ. ಮಕ್ಕಳು ಸಮಸ್ಯೆಗಳಿಗೆ ಒಳಗಾದರೆ ತಕ್ಷಣ ಶಾಲೆಯ ಗಮನಕ್ಕೆ ತರುವುದು ಪೋಷಕರ ಕರ್ತವ್ಯವಾಗಿರುತ್ತದೆ. ಹಾಗಾದರೆ ಅದರ ಬಗ್ಗೆ ನಾವು ಕೂಡಲೆ ಕಾರ್ಯೋನ್ಮುಖರಾಗಲು ಸಾಧ್ಯವಾಗುತ್ತದೆ ಎಂದು ತಿಳಿಸುತ್ತಾ ಮಕ್ಕಳ ಸುರಕ್ಷತೆಯ ಬಗ್ಗೆ ಕೆಲವಷ್ಟು ಮಾಹಿತಿಗಳನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಣ ಸಂಯೋಜಕರಾದ ಸವಿತಾ ಭಟ್, ಶ್ರೀಮಧು ಕೆ.ಎಲ್., ಶ್ರೀಮತಿ ಲತಾ ದೇವಾಡಿಗ ಉಪಸ್ಥಿತರಿದ್ದರು. ಪೋಷಕ- ಶಿಕ್ಷಕ – ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಸುಮಲತಾ ಮತ್ತು ಪ್ರಸನ್ನ ಎಮ್. ನಿರ್ವಹಿಸಿದರು.
















