Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎರಡನೇ ಹಂತದ ಕಚ್ಚಾತೈಲ ಸಂಗ್ರಹಣೆ ಕಾಮಗಾರಿಯನ್ನು ಕೈಗೊಳ್ಳುವಾಗ ಸ್ಥಳೀಯ ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಕಚ್ಚಾತೈಲ ಸಂಗ್ರಹಣೆ ಘಟಕದ ಎರಡನೇ ಹಂತದ ಕಾಮಗಾರಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಚ್ಚಾತೈಲ ಸಂಗ್ರಹಣಾ ಘಟಕದ ಅಭಿವೃದ್ಧಿಗೆ ಅಗತ್ಯವಿರುವ ಭೂಮಿಯನ್ನು ಸಾರ್ವಜನಿಕರಿಂದ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ ಕೆಲವರಿಗೆ ಪರಿಹಾರದ ಹಣವನ್ನು ನೀಡಿರುವುದಿಲ್ಲ ಎಂದು ಕೇಳಿ ಬರುತ್ತಿದೆ. ಈ ಘಟಕಕ್ಕೆ ಭೂಮಿ ನೀಡಿರುವ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ಶೀಘ್ರದಲ್ಲಿಯೇ ನೀಡಬೇಕೆಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಎರಡನೇ ಹಂತದ ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸುತ್ತಮುತ್ತ ಪ್ರದೇಶಗಳ ಮನೆಯ ವೀಡಿಯೋ ಚಿತ್ರೀಕರಣವನ್ನು ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಬಂಡೆಗಳ ಸ್ಫೋಟ ಸಂದರ್ಭದಲ್ಲಿ ಯಾವುದೇ ರೀತಿಯ ಹಾನಿಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಭೂ ಸ್ವಾಧೀನದ ಪರಿಹಾರದ ಹಣವನ್ನು ಮಾಲೀಕರಿಗೆ ಒದಗಿಸುವ ಸಂಬಂಧ ನೈಜ ಭೂ ಮಾಲೀಕರ ಕುರಿತು ಇರುವ ಗೊಂದಲವನ್ನು ಸ್ಥಳೀಯ ಕಂದಾಯ, ಸರ್ವೇ ಹಾಗೂ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಪರಿಶೀಲಿಸಬೇಕು ಎಂದ ಅವರು, ಕಾಮಗಾರಿಯ ಸಂದರ್ಭದಲ್ಲಿ ಪಾರಂಪರಿಕ ತಾಣಗಳಿಗೆ ಹಾನಿಯಾಗದಂತೆ ರ‍್ಮವಹಿಸಬೇಕು ಎಂದರು.

    ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿಯ ಸಂದರ್ಭದಲ್ಲಿ ಬಂಡೆ ಕಲ್ಲುಗಳನ್ನು ಸ್ಫೋಟಿಸುವುದರಿಂದ ಸ್ಥಳೀಯ ವ್ಯಾಪ್ತಿಯ ಬಾವಿಗಳಲ್ಲಿನ ನೀರಿನ ಗುಣಮಟ್ಟದಲ್ಲಿ ವ್ಯತ್ಯಾಸವಾಗಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು.

    ಕಾಮಗಾರಿ ಕೈಗೊಳ್ಳುವಾಗ ಸ್ಥಳೀಯ ಜನರಿಗೆ ಆದ್ಯತೆ ನೀಡಬೇಕು. ಹೊರಗಿನಿಂದ ಬಂದತಂತಹ ಕಾರ್ಮಿಕರುಗಳಿಗೆ ಪ್ರತ್ಯೇಕ ಕಾಲೋನಿಗಳನ್ನು ನಿರ್ಮಿಸಿ, ವಾಸವಿರಲು ಅನುವು ಮಾಡಿಕೊಡಬೇಕು ಎಂದ ಅವರು, ಕಾಮಗಾರಿ ಸಂಬಂಧ ವಾಹನಗಳ ಸಂಚಾರವು ಸುರಕ್ಷತೆಯಿಂದ ಚಲಿಸುವಂತೆ ನೋಡಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಭಾಗವಹಿಸಿದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರುಗಳು, ಮೊದಲನೇ ಹಂತದ ಕಾಮಗಾರಿಯನ್ನು ಕೈಗೊಂಡಾಗ ಅನೇಕ ರೀತಿಯ ಸಮಸ್ಯೆಗಳು ಈ ಭಾಗದ ಜನರಿಗೆ ಉಂಟಾಗಿದ್ದವು. ಈ ಬಾರಿಯೂ ಅವು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ತಮ್ಮ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಮಂಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ತಹಶೀಲ್ದಾರರು, ತಾಲೂಕು ಪಂಚಾಯತ್ ಇ.ಓ, ಕೆ.ಐ.ಎ.ಡಿ.ಬಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026
    Leave A Reply Cancel Reply

    ten − 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.