Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ಗಣರಾಜ್ಯೋತ್ಸವದ ವೈಭವ
    alvas nudisiri

    ಆಳ್ವಾಸ್‌ನಲ್ಲಿ ಗಣರಾಜ್ಯೋತ್ಸವದ ವೈಭವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ವಿದ್ಯಾಗಿರಿ
    : ‘ಕ್ರೀಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ’ ಎಂದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು, ‘ಜಾತಿ ಮತ ಮೀರಿದ  ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರತೆಯ ಅಡಿಪಾಯ’ ಎಂದು ಸಂದೇಶ ನೀಡಿದರು.

    Click Here

    Call us

    Click Here

    ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ವನಜಾಕ್ಷಿ ಶ್ರೀಪತಿ ಭಟ್ ಬೃಹತ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ವೈವಿಧ್ಯತೆಯಲ್ಲಿ ಏಕತೆಯೇ ದೇಶದ ಸುಭದ್ರತೆ. ಈ ಸದೃಢತೆಗೆ ನ್ಯಾಯಾಲಯದ ಕ್ರೀಯಾಶೀಲ ಪಾತ್ರ ಬಹುಮುಖ್ಯ. ಕಾನೂನು ಉಲ್ಲಂಘನೆ, ಅರಾಜಕತೆ ಮತ್ತಿತರ ಸಂದರ್ಭಗಳಲ್ಲಿ ನ್ಯಾಯಾಲಯವು ಪ್ರಜಾಪ್ರಭುತ್ವ ಚಿಂತನೆ ಮೂಲಕ ಪ್ರತಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ಪ್ರಜಾಪ್ರಭುತ್ವದ ಕಾವಲು ನಾಯಿಯಂತೆ ನ್ಯಾಯಾಲಯ ಎಚ್ಚರದಿಂದ ಕಾರ್ಯ ನಿರ್ವಹಿಸುತ್ತದೆ ಎಂದು ವಿವರಿಸಿದರು.

    ‘ಸ್ವಾತಂತ್ರಯದ ಸದ್ಬಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ’ಎಂದ ಅವರು, ‘ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆ ನಮ್ಮ ಸ್ವಾತಂತ್ರ‍್ಯದ ಮೂಲ ಮಂತ್ರವಾಗಿದೆ. ಇದಕ್ಕೆ 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಹಾಗೂ 1942ರ ಕ್ವಿಟ್ ಇಂಡಿಯಾ ಚಳವಳಿಗಳು ಪ್ರಮುಖ ನಿದರ್ಶನ. ಇದರಿಂದಾಗಿ 2ನೇ ಮಹಾಯುದ್ಧ ಸಂದರ್ಭದಲ್ಲಿ ಬ್ರಿಟಿಷರು ಸ್ವಾತಂತ್ರ‍್ಯ ನೀಡುವ ಆಲೋಚನೆಗೆ ಬಂದರು. 1946ರಲ್ಲಿಯೇ ಸಂವಿಧಾನ ರಚಿಸುವ ಕಾರ್ಯ ಆರಂಭಗೊಂಡಿತು. ದೇಶಕ್ಕೆ ಸಂವಿಧಾನವೇ ಸುಪ್ರೀಂ. ನ್ಯಾಯಲಯ ಸಂವಿಧಾನದ ಸಂರಕ್ಷಕ ಎಂದರು.

    ದೇಶದ ಬೆಳವಣಿಗೆ ಹಾಗೂ ಸುವ್ಯವಸ್ಥೆಯು  ಆರೋಗ್ಯ ಮತ್ತು ಶಿಕ್ಷಣದಲ್ಲಿ ಇದೆ. ಆ ಮಹಾನ್ ಕಾರ್ಯ ಮಾಡುತ್ತಿರುವ ಡಾ.ಎಂ.ಮೋಹನ ಆಳ್ವ ಅನನ್ಯ ಸಾಧಕರು ಎಂದು ಶ್ಲಾಘಿಸಿದರು. ಬದುಕಿನ ಯಶಸ್ಸಿಗೆ ಸ್ವಾಮಿ ವಿವೇಕಾನಂದ ಅವರು ಶಿಸ್ತು, ಶ್ರಮ, ಆತ್ಮ ವಿಶ್ವಾಸ, ಸಮಯಪ್ರಜ್ಞೆ ಮತ್ತು ನಿರ್ಭಯತೆ ಎಂಬ ಪಂಚಸೂತ್ರಗಳನ್ನು ನೀಡಿದ್ದಾರೆ. ನಾನು ಜೀವನದಲ್ಲಿ ಪಾಲಿಸಿದ್ದೇನೆ. ನೀವೂ ಅನುಸರಿಸಿ ಎಂದು ಮಕ್ಕಳಿಗೆ ಹಿತವಚನ ಹೇಳಿದರು.

    ಸನ್ನಡತೆ ಹಾಗೂ ಬಾಂಧವ್ಯ ಹೊಂದಿದ ನಾಗರಿಕ ಸಮಾಜದಿಂದ ಯಶಸ್ಸು ಸಾಧ್ಯ. ಅದಕ್ಕಾಗಿ ಆರ್ಥಿಕ, ಸಾಮಾಜಿಕ, ರಾಜಕೀಯ ಶೈಕ್ಷಣಿಕ  ಸಮಾನತೆಯೇ ನಮ್ಮ ಐಕ್ಯ ಮಂತ್ರ. ಜಾತಿ- ಮತ ಮತ್ತಿತರ ವೈವಿಧ್ಯತೆ ನಡುವೆಯೂ ಐಕ್ಯತೆಯಿಂದ ಇದ್ದರೆ ಶಕ್ತಿ ಎಂದು ವಿಶ್ಲೇಷಿಸಿದರು.

    Click here

    Click here

    Click here

    Click Here

    Call us

    Call us

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿ, ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯರು ಸೇರಿದಂತೆ 30000ಕ್ಕೂ ಅಧಿಕ ಜನಸಮೂಹ ದೇಶಭಕ್ತಿಯ ಕಹಳೆ ಮೊಳಗಿಸಿತು.

    ಇದಕ್ಕೂ ಮೊದಲು, ವಂದೇ ಮಾತರಂ  ಮೊಳಗಿದ ಬಳಿಕ ನ್ಯಾಯಮೂರ್ತಿ ಎಚ್.ಪಿ. ಸಂದೇಶ್  ತ್ರಿವರ್ಣ ಧ್ವಜ ಆರೋಹಣ ಮಾಡಿದ್ದು, ಬಳಿಕ ರಾಷ್ಟ್ರಗೀತೆ ‘ಜನ ಗಣ ಮನ’ ಮೊಳಗಿತು. ಎಲ್ಲರೂ ಗೌರವ ಸಲ್ಲಿಸಿದರು. ವೇದಿಕೆಯ ಬಾನೆತ್ತರದಲ್ಲಿ ತಿರಂಗಾ ಹಾರಾಡಿದರೆ, ಸಭಾಂಗಣದಲ್ಲಿ ನಿಂತ ವಿದ್ಯಾರ್ಥಿಗಳು ತ್ರಿವರ್ಣದಲ್ಲಿ  Bharath ಮೂಡಿಸುವ ಮೂಲಕ ದೇಶಪ್ರೇಮ ಸಾರಿದರು. ಆಳ್ವಾಸ್ ಸಂಸ್ಥೆಯ 6257 ವಿದ್ಯಾರ್ಥಿಗಳು ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಭಾರತ ವನ್ನು ಮೂಡಿಸಿದರು.

    ಸಾಂಸ್ಕೃತಿಕ ಗಾಯನ ತಂಡವು ಕೋಟಿ ಕಂಠೋಸೇ ಗಾನ ಹಾಡಿದಾಗ ಸಭಾಂಗಣದಲ್ಲಿ ಸೇರಿದ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ತ್ರಿವರ್ಣ  ರಾಷ್ಟ್ರ ಧ್ವಜ ಬೀಸಿ ದೇಶದ ಪ್ರೀತಿಯನ್ನು ಸಾದರ ಪಡಿಸಿದರು. ವೇದಿಕೆಗೆ ಬಂದ ತ್ರಿವರ್ಣ ಸಿಂಹ ವೇಷ  ವಿಶೇಷ ಮೆರುಗು ನೀಡಿದವು.

    ಆವರಣದ ಎಲ್ಲೆಲ್ಲೂ ಕೇಸರಿ, ಬಿಳಿ, ಹಸಿರು ವರ್ಣದ ರಂಗು ಸಂಭ್ರಮಿಸಿತು. ಸುಮಾರು 300 ಕ್ಕೂ ಅಧಿಕ ಮಾಜಿ ಸೈನಿಕರೂ ಧ್ವಜಕ್ಕೆ ವಂದನೆ ಸಲ್ಲಿಸಿದರು. ಬಾನಂಗಳಕ್ಕೆ ತ್ರಿವರ್ಣ ರಂಗು ಬ್ಲೋವರ್ ಮೂಲಕ ಚಿಮ್ಮಿ ಬಂತು. ಆರಂಭದಲ್ಲಿ ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಗೌರಿ ಜಿ.ಪಿ ಅವರಿಂದ ಗೌರವ ಶ್ರೀರಕ್ಷೆ  ಸ್ವೀಕರಿಸಿದ ನ್ಯಾಯಮೂರ್ತಿ ಅವರು,  ಬ್ಯಾಂಡ್ ಹಾಗೂ ಗೌರವಗಳೊಂದಿಗೆ ವೇದಿಕೆಗೆ ಬಂದರು. ಸೀನಿಯರ್ ಅಂಡರ್ ಆಫೀಸರ್ ಯದುನಂದನ್ ಪರೇಡ್ ವರದಿ ಸಲ್ಲಿಸಿದರು. ಕರ್ನಾಟಕ ಸಿಇಟಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಅಕ್ಷಯ್ ಹೆಗ್ಡೆ ಅವರಿಗೆ 2ಲಕ್ಷ ರೂಪಾಯಿ ನೀಡಿ ಗೌರವಿಸಲಾಯಿತು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ. ಎಂ. ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ್ ಆಳ್ವ ಶ್ರೀಪತಿ ಭಟ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಇದ್ದರು. ಫ್ಲಾಯಗ್ ಏರಿಯಾದಲ್ಲಿ ವಸುದೈವ ಕುಟುಂಬಕ ಪರಿಕಲ್ಪನೆಯ ಮಣ್ಣಿನ ಕಲಾಕೃತಿ ಎಲ್ಲರ ಗಮನ ಸೆಳೆಯಿತು.

    ಉಪನ್ಯಾಸಕರಾದ ರಾಜೇಶ್ ಡಿ’ಸೋಜಾ ಹಾಗೂ  ಕಲಾ ವಿಭಾಗದ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    eight + 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.