Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದ ಪಂಚವರ್ಣದಿಂದ 290ನೇ ವಾರದ ಅಭಿಯಾನ
    ಊರ್ಮನೆ ಸಮಾಚಾರ

    ಕೋಟದ ಪಂಚವರ್ಣದಿಂದ 290ನೇ ವಾರದ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್,ಹಂದಟ್ಟು ಮಹಿಳಾ ಬಳಗದ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾಮಪಂಚಾಯತ್, ಎಸ್‌ಎಲ್‌ಆರ್‌ಎಂ ಘಟಕ ಇವರ ಸಂಯೋಜನೆಯೊಂದಿಗೆ ಬೀಚ್ ಕ್ಲಿನಿಂಗ್ ಭಾಗವಹಿಸಿ ಬಹುಮಾನ ಗೆಲ್ಲಿ ಎಂಬ ವಿನೂತನವಾಗಿ ಬೀಚ್ ಕ್ಲಿನಿಂಗ್ ಅಭಿಯಾನ ಭಾನವಾರ ತೆಕ್ಕಟ್ಟೆ ಗ್ರಾ.ಪಂ ಕೊಮೆ ಹಮ್ಮಿಕೊಂಡಿತು.

    Click Here

    Call us

    Click Here

    ಒಂದು ಹೊಸ ಜಾಗೃತಿ ಮೂಡಿಸುವ ಸಲುವಾಗಿ ಬೀಚ್ ಕ್ಲಿನಿಂಗ್ ನಲ್ಲಿ ಭಾಗಿಯಾಗಿ ಬಹುಮಾನ ಗೆಲ್ಲಿ ಎಂಬ ಹೊಸ ಯೋಜನೆ ಕೈಗೆಟ್ಟುಕುವಂತೆ ಮಾಡಿತು. ಯುವ ಸಮುದಾಯದಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂಬ ತುಡಿತದೊಂದಿಗೆ ಈ ಯೋಜನೆಯನ್ನು ಪಂಚವರ್ಣ ಸಂಘಟನೆ ಜಾರಿಗೊಳಿಸಿತು.

    ತೆಕ್ಕಟ್ಟೆ ಹಾಗೂ ಸಮೀಪದ ಕೋಟ ಭಾಗದ ಮಕ್ಕಳು ಸ್ವ ಇಚ್ಛೆಯಿಂದ ಭಾಗಿಯಾಗಿದ್ದು ಪಂಚವರ್ಣ ಸಂಘಟನೆ ನಿರಂತರವಾಗಿ 290 ವಾರಗಳ ಕಾಲ ರಸ್ತೆ ಒಳರಸ್ತೆ, ಬೀಚ್,ದೇಗುಲ ಹೀಗೆ ಹಲವು ಭಾಗಗಳನ್ನು ಸ್ವಚ್ಛಗೊಳಿಸುತ್ತಾ ಜನಸಾಮಾನ್ಯರಲ್ಲಿ ಜಾಗೃತಿ ಆಂದೋಲವನ್ನು ಹಮ್ಮಿಕೊಂಡು ಬರುತ್ತಿದೆ ಆದರೆ ಭಾನುವಾರ ಹಮ್ಮಿಕೊಂಡ ಈ ಅಭಿಯಾನ ತೆಕ್ಕಟ್ಟೆ ಸೇರಿದಂತೆ ವಿವಿದೆಡೆಗಳಿಂದ ಸಾಕಷ್ಟು ಪ್ರಮಾಣದಲ್ಲಿ ಯುವ ಸಮುದಾಯ ತೊಡಗಿಕೊಂಡ ರೀತಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಿತು.

    ತೆಕ್ಕಟ್ಟೆ ಗ್ರಾಮಪಂಚಾಯತ್ ಹಾಗೂ ಅದರ ಎಸ್ ಎಲ್ ಆರ್ ಎಂ ಘಟಕದ ನಿರ್ವಾಹಕಿ ರೇವತಿ ತೆಕ್ಕಟ್ಟೆ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ಜರಗಿದ್ದು ವಿಶೇಷವಾಗಿದೆ.

    ವಿನೂತನವಾಗಿ ಹಮ್ಮಿಕೊಂಡ ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲಾ ಯುವ ಸಮುದಾಯಕ್ಕೆ ಪಂಚವರ್ಣ ಸಂಘಟನೆ ಗಣ್ಯರ ಸಮ್ಮುಖದಲ್ಲಿ ಸ್ಟೀಲ್ ನೀರಿನ ಬಾಟಲಿ ನೀಡಿ ಗೌರವಿಸಿತು.

    Click here

    Click here

    Click here

    Click Here

    Call us

    Call us

    ಮುಖ್ಯ ಅಭ್ಯಾಗತರಾಗಿ ಮೊಗವೀರ ಯುವ ಸಂಘದ ನಿಯೋಜಿತ ಉಡುಪಿ ಜಿಲ್ಲಾಧ್ಯಕ್ಷ ರವೀಶ್ ಕೊರವಡಿ, ಕೊಮೆ ಕೊರವಡಿ ವಿವಿದ್ದೋದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಪೂಜಾರಿ, ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ರಾಘವೇಂದ್ರ ಹರಪ್ಪನಕೆರೆ, ಕೋಶಾಧಿಕಾರಿ ರಾಜೇಶ್ ಕಾಂಚನ್, ಪಂಚವರ್ಣ ಯುವಕಮಂಡಲದ ಸದಸ್ಯ ಮಹೇಶ್ ಬೆಳಗಾವಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ತೆಕ್ಕಟ್ಟೆ ಎಸ್‌ಎಲ್‌ಆರ್‌ಎಂ ಘಟಕದ ನಿರ್ವಾಹಕಿ ರೇವತಿ ತೆಕ್ಕಟ್ಟೆ ಉಪಸ್ಥಿತರಿದ್ದರು.

    ಕಾರ್ಯಕ್ರಮ ಸಂಯೋಜಕ ರವೀಂದ್ರ ಕೋಟ ಸ್ವಾಗತಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಿಳಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ಮಕ್ಕಳಿಂದಲೇ ದೊಡ್ಡ ಮಟ್ಟದ ತ್ಯಾಜ್ಯ ತೆರವು:
    ಭಾನುವಾರ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಯುವ ಆಸಕ್ತ ಮನಸ್ಸುಗಳು ಸಾಕಷ್ಟು ಪ್ರಮಾಣದಲ್ಲಿ ಬೀಚ್‌ಗೆ ಇಳಿದು ದೊಡ್ಡ ಮಟ್ಟದ ತ್ಯಾಜ್ಯಗಳನ್ನು ಉತ್ಸಾಹದಿಂದ ತೆರವುಗೊಳಿಸಿದರು. ಇದು ಸಂಘಟನೆ ಹಾಗೂ ಸ್ಥಳೀಯರನ್ನು ನಿಬ್ಬೆರಗಾಗುವಂತೆ ಮಾಡಿತು.

    ಬೀಚ್ ಮಲಿನಗೊಳಿಸದಿರಿ ಗೋಪಾಲ್ ಪೂಜಾರಿ ಎಚ್ಚರಿಕೆ:
    ಪ್ರಕೃತಿದತ್ತವಾದ ಈ ಸಮುದ್ರ ಕಿನಾರೆ ನಮ್ಮ ಕರಾವಳಿಯ ಸೌಂದರ್ಯ ಸೊಬಗಿನ ತಾಣವಾಗಿದೆ ಆದರೆ ವಿಪರ್ಯಾಸವೆಂದರೆ ಇಂದು ಅದೇ ತಾಣವನ್ನು ಈ ಮುನುಷ್ಯ ಹಾಳುಗೆಡವುತ್ತಿದ್ದು ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಅದರ ಮೇಲೆ ಅನಾಚರಗಳನ್ನುಗೈಯುತ್ತಿದ್ದಾನೆ, ಇದರಿಂದ ಮನುಕುಲಕ್ಕೆ ಆಪತ್ತು ತಪ್ಪಿದ್ದಲ್ಲ ಈ ಬಗ್ಗೆ ಜಾಗೃತರಾಗುವುದು ಒಳಿತು.ಸಮಾಜಮುಖಿ ಕಾರ್ಯದೊಂದಿಗೆ ಪಂಚವರ್ಣ ಸಂಘಟನೆ ಈ ರೀತಿಯ ಪರಿಸರಪ್ರೇಮ, ವಿನೂತನ ಕಾರ್ಯಕ್ರಮ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸಲಿದೆ. ಈ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಸಂಘಟನೆಯನ್ನು ಅಭಿನಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    eighteen − twelve =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.