ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಕಷ್ಟು ಕುಟುಂಬಗಳು ತಮ್ಮ ಜೀವನ ಕಟ್ಟಿಕೊಂಡು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಶುಕ್ರವಾರ ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮತ್ತು ಮಾತೃಶ್ರೀ ಸೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ನಂಬಿಕೆ ತಳಹದಿದಲ್ಲಿ ಕಾರ್ಯಾಚರಿಸುವ ಏಕಮಾತ್ರ ಸಂಸ್ಥೆಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುತಿಸಿಕೊಂಡಿದೆ. ಕಾವಂದರ ಚಿಂತನೆ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ಈ ದಿಸೆಯಲ್ಲಿ ಸ್ವಂತ ಉದ್ಯಮಕ್ಕೆ ಈ ಹೊಲಿಗೆ ತರಬೇತಿ ಶಕ್ತಿಯುತವಾಗಿ ಈ ಸಮಾಜದಲ್ಲಿ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಶ್ರೀ ಕ್ಷೇತ್ರ ಪ್ರತಿಯೋಜನೆ ಯೋಚನೆ ದುರ್ಬಲರ ಕಣ್ಣಿರೊರೆಸುವ ಕಾರ್ಯ ಮಾಡಲಿದೆ ಎಂದರು.
ಸಭೆಯಲ್ಲಿ ಸಂಸದ ಕೋಟರವರನ್ನು ಗುರುತಿಸಿ, ಅಭಿನಂದಿಸಲಾಯಿತು. ತರಬೇತಿ ನಿರತರ ಅಮೃತ ಪೂಜಾರಿ ಕದ್ರಿಕಟ್ಟು ಅವರಿಗೆ ಸಂಸದ ಕೋಟ ಪ್ರಮಾಣಪತ್ರವನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಕೋಟ ವಲಯ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕಸಾಪ ತಾಲೂಕು ಅಧ್ಯಕ್ಷ ಜಿ. ರಾಮಚಂದ್ರ ಐತಾಳ್, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ರವೀಂದ್ರ ಐತಾಳ್ ಪಾರಂಪಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ. ಕೋಟ ಒಕ್ಕೂಟದ ಪ್ರೇಮ ಹಂದಟ್ಟು, ತರಬೇತುದಾರೆ ಸೇವಾಪ್ರತಿನಿಧಿ ಶೋಭಾ ಶಂಕರ್ ಪುತ್ರನ್ ಉಪಸ್ಥಿತರಿದ್ದರು.
ಯೋಜನೆಯ ಒಕ್ಕೂಟದ ಮೇಲ್ವಿಚಾಕರಿ ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿ, ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿ, ಸೇವಾಪ್ರತಿನಿಧಿ ಶ್ರೀಲಕ್ಷ್ಮೀ ಪ್ರಭು ವಂದಿಸಿದರು.
















