ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲ ಪುರಾತನವಾದ ಕಾರಣಿಕ ಕ್ಷೇತ್ರಗಳಲ್ಲೊಂದಾಗಿದೆ. ಈ ನಿಟ್ಟಿನಲ್ಲಿ ಭಕ್ತ ಸಮುದಾಯ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಸಾಕ್ಷೀಯಾಗಿದೆ ಎಂದು ಸಮಾಜ ಸೇವಕ ಪಾರಂಪಳ್ಳಿ ರವೀಂದ್ರ ಐತಾಳ್ ಹೇಳಿದರು.
ಅವರು ಭಾನುವಾರ ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಪ್ರತಿಯೊರ್ವರ ಸಹಕಾರ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕರಾವಳಿಯ ಧರ್ಮರತ್ನಾಕರ ಆನಂದ್ ಸಿ. ಕುಂದರ್ ದೇಗುಲಗಳ ಅಭಿವೃದ್ಧಿಗೆ ಸಾಕಷ್ಟು ದೇಣಿಗಳನ್ನು ನೀಡುತ್ತಿದ್ದಾರೆ. ಅಂತೆಯೇ ಈ ದೇಗುಲಕ್ಕೆ ತನ್ನ ವತಿಯಿಂದ 25ಸಾವಿರ ರೂಗಳನ್ನು ಅಭಿವೃದ್ಧಿಗೆ ನೀಡುವುದಾಗಿ ಘೋಷಿಸಿದರು.

ದೇಗುಲದ ಅಧ್ಯಕ್ಷ ಸುರೇಶ್ ಗಾಣಿಗ ಶೇವಧಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮವನ್ನು ದೇಗುಲದ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ದೇಗುಲದ ಸೇವೆಯಲ್ಲಿ ನಿರತರಾದ ಸುಜಾತ ಶ್ರೀಧರ ದೇವಾಡಿಗ, ಜೀವನ್ ಸಮೃದ್ಧ್, ದೇವಿ ಮಂಜುನಾಥ ದೇವಾಡಿಗ ಅವರುಗಳನ್ನು ಸನ್ಮಾನಿಸಲಾಯಿತು.
ಮುಖ್ಯ ಅಭ್ಯಾಗತರಾಗಿ ಕೋಟ ಪಂಚಾಯತ್ ಉಪಾಧ್ಯಕ್ಷರಾದ ಪಾಂಡು ಪೂಜಾರಿ, ಸದಸ್ಯರಾದ ಅಜಿತ್ ದೇವಾಡಿಗ, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಗುತ್ತಿಗೆದಾರ ಹೋಬಳಿಮನೆ ರಾಜು ಪೂಜಾರಿ, ದೇಗುಲದ ಕಾರ್ಯದರ್ಶಿ ಹರೀಶ್ ದೇವಾಡಿಗ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ದೀಪಿಕಾ ರವಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
















