ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಇತ್ತೀಚಿಗೆ ಭೇಟಿ ನೀಡಿದರು.
ಶ್ರೀಪಾದರನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಪುತ್ರ ಖ್ಯಾತರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಇವರು ಸ್ವಾಗತಿಸಿಕೊಂಡು ಕೇಂದ್ರದ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರು ಕೇಂದ್ರದ ರಥ ತಯಾರಿಕೆಯ ಚಟುವಟಿಕೆಯನ್ನು ಗಮನಿಸಿ ರಥ ತಯಾರಿಸುವ ವಿಧಾನ ಮತ್ತು ರಥಗಳ ಮಾಹಿತಿಯನ್ನು ಪಡೆದುಕೊಂಡರು.
ರಥಶಿಲ್ಪಿ ಗಣಪತಿ ಆಚಾರ್ಯ, ಸತೀಶ ಆಚಾರ್, ಕರಕುಶಲ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರದ ವತಿಯಿಂದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
















