ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟದ ಪಂಚವರ್ಣ ಸಂಘಟನೆಯ ಪ್ರತಿ ಭಾನುವಾರದ ಪರಿಸರ ಸ್ನೇಹಿ ಅಭಿಯಾನದ ಭಾಗವಾಗಿ ಬೀಚ್ ಕ್ಲಿನಿಂಗ್ ಭಾಗವಹಿಸಿ ಬಹುಮಾನ ಗೆಲ್ಲಿ ಕಾರ್ಯಕ್ರಮಕ್ಕೆ ಕೋಟ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಸಲಹೆಯ ಮೇರೆಗೆ ಬೆಂಗಳೂರು ಪ್ರಸಿದ್ಧ ಕ್ಯಾಪ್ಸ್ ಫೌಂಡೇಶನ್ ವತಿಯಿಂದ ಸಂಸ್ಥೆಯ ಮುಖ್ಯಸ್ಥ ಸಿಎ ಚಂದ್ರಶೇಖರ ಶೆಟ್ಟಿ ಉಚಿತವಾಗಿ ಸ್ಟೀಲ್ ನೀರಿನ ಬಾಟಲ್ ಅನ್ನು ಪಂಚವರ್ಣ ಅಧ್ಯಕ್ಷರಾದ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಮುಖರು ಉಪಸ್ಥಿತರಿದ್ದರು.










