Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾ.ಹೆ. 169ಎ ರ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಕೋಟ
    Uncategorized

    ರಾ.ಹೆ. 169ಎ ರ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕಾರ್ಕಳದಲ್ಲಿ ಹಾದುಹೋಗುವ 169ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವುದರ ಜೊತೆಗೆ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ವೈಜ್ಞಾನಿಕವಾಗಿ ಮೌಲ್ಯವನ್ನು ನಿಗಧಿಪಡಿಸಿ ನೀಡಬೇಕೆಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. 

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ, ಬಜಗೋಳಿ, ಮಾಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪರಿಹಾರ ಪಾವತಿಗೆ ಸಂಸಂಬಂಧಿಸಿದಂತೆ ಚರ್ಚಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169ಎ ಯ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲು ಭೂ ಸ್ವಾಧೀನ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಅಲ್ಲಿನ ಸ್ಥಳೀಯ ಜನರು ಅನೇಕ ವರ್ಷಗಳಿಂದ ತಾವು ವಾಸವಿರುವ ಮನೆ ಹಾಗೂ ಕೃಷಿ ಭೂಮಿಯನ್ನು ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೀಡುವ ಅಗತ್ಯತೆ ಉಂಟಾಗಿದೆ. ಅವರುಗಳಿಗೆ ಪ್ರಸ್ತುತ ಮಾರುಕಟ್ಟೆ ಅನುಗುಣವಾಗಿ ಪರಿಹಾರದ ಹಣವನ್ನು ನೀಡಿದ್ದಲ್ಲಿ ಅವರು ಭವಿಷ್ಯ ಜೀವನ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಇದಕ್ಕೆ ಒತ್ತು ನೀಡಬೇಕು ಎಂದರು.

    ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವುದರೊಂದಿಗೆ ತ್ವರಿತವಾಗಿ ಮುಗಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಮಲ್ಪೆ – ಕರಾವಳಿ ಜಂಕ್ಷನ್ ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂಮಿಯನ್ನು ಭೂ ಸ್ವಾಧೀನ ಗೊಳಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವುದರೊಂದಿಗೆ ಪೂರ್ಣಗೊಳಿಸಿ, ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಒಳಪಡುವ ಮನೆ, ಕೃಷಿ ಜಮೀನು ಸೇರಿದಂತೆ ಮತ್ತಿತರ ಸ್ವತ್ತುಗಳನ್ನು ಅಧಿಕಾರಿಗಳು ನಿಖರವಾಗಿ ಪರಿವೀಕ್ಷಣೆ ಮಾಡಿ, ನೈಜತೆಗೆ ಅನುಗುಣವಾಗಿ ಪ್ರಸ್ತುತ ಮಾರುಕಟ್ಟೆ ಮೌಲ್ಯಕ್ಕೆ ನಿಗಧಿಪಡಿಸಲು ಸೂಚನೆ ನೀಡಿದರು. 

    ಶಾಸಕ ಸುನಿಲ್ ಕುಮಾರ್ ಮಾತನಾಡಿ, ಭೂ ಸ್ವಾಧೀನಕ್ಕೆ ಒಳಗಾಗಿರುವ ಮನೆಯ ಅಥವಾ ಭೂಮಿಯ ಮಾಲೀಕರಿಗೆ ಗರಿಷ್ಠ ಪ್ರಮಾಣದ ಪರಿಹಾರದ ಹಣವನ್ನು ಒದಗಿಸಬೇಕು. ರಾಷ್ಟ್ರೀಯ ಹೆದ್ದಾರಿ 169ಎ ಗೆ ನೆರೆಯ ಜಿಲ್ಲೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ನೀಡಿರುವ ಪರಿಹಾರದ ಹಣವು ಹೆಚ್ಚು ಇದೆ. ಒಂದೇ ರಸ್ತೆಗೆ ಭೂ ಸ್ವಾಧೀನದ ಪರಿಹಾರದ ಹಣ ವ್ಯತ್ಯಾಸದಿಂದ ಭೂ ಮಾಲೀಕರಿಗೆ ಗೊಂದಲದ ವಾತಾವರಣ ಉಂಟಾಗಿದೆ. ಅಧಿಕಾರಿಗಳು ಕಾನೂನಿನ ಅನ್ವಯ ಪರಿಹಾರದ ಮೊತ್ತವನ್ನು ನಿಗಧಿಗೊಳಿಸಿ, ನೀಡಬೇಕು ಎಂದರು.

    Click here

    Click here

    Click here

    Click Here

    Call us

    Call us

     ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಡಿ.ಎಫ್.ಓ ರುಥ್ರೇನ್ ಪಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರರು, ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ ಅಭಿಯಂತರರುಗಳು, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    5 − 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.