Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು  ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳಾವರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವಿಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-01ನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ಪರೀಕ್ಷೆಯು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮೂಲವಾಗಿರುವುದರ ಜೊತೆಗೆ ಬಹಳ ಮಹತ್ವದ್ದಾಗಿದ್ದು, ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ದೋಷರಹಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆಯನ್ನು ಬರೆಯುವ ವಾತಾವರಣವನ್ನು ಕಲ್ಪಿಸಬೇಕು ಎಂದರು.

    ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 17,181 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊAಡಿದ್ದು, ಇದರಲ್ಲಿ 16,657 ಹೊಸ ವಿದ್ಯಾರ್ಥಿಗಳು, 383 ಖಾಸಗಿ ಅಭ್ಯರ್ಥಿಗಳು, 135 ಪುನರಾವರ್ತಿತ ಅಭ್ಯರ್ಥಿಗಳು, 6 ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ಇದ್ದು, ಪರೀಕ್ಷೆಯು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಿಗದಿತ ದಿನಾಂಕಗಳಲ್ಲಿ ನಡೆಯಲಿದೆ ಎಂದರು.

    ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷೆಯನ್ನು ಬರೆಯಲು ಪ್ರವೇಶಿಸಲು ಅನುಮತಿ ನೀಡಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಮೊಬೈಲ್, ಸ್ಮಾರ್ಟ್ ವಾಚ್, ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಹಿತಿಯನ್ನು ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆ ಪತ್ರಿಕೆ ಮೂಲಕ ಆರ್ಥಿಕ ಲಾಭಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.

    ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ಕೇಂದ್ರ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚಿಸಲು ಕ್ರಮವಹಿಸಲಾಗುವುದು. ಅಪರಿಚಿತ ವ್ಯಕ್ತಿಗಳು ಕೇಂದ್ರದ ಸುತ್ತಮುತ್ತ ಓಡಾಡದಂತೆ ಎಚ್ಚರವಹಿಸಲಾಗುವುದು. ಪ್ರತೀ ಪರೀಕ್ಷಾ ಕೆಂದ್ರಗಳಿಗೆ ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ಮೂರು ಜನ ಸದಸ್ಯರ ಸಮಿತಿಯನ್ನು ಮಾಡಲಾಗಿದ್ದು, ಇವರ ವಾಹನಕ್ಕೆ ಪೋಲಿಸ್ ಸಿಬ್ಬಂದಿ ನೇಮಿಸಬೇಕು. ಪ್ರಶ್ನೆ ಪತ್ರಿಕೆ ಸಾಗಾಣಿಕೆ ಮಾಡುವ ವಾಹನಕ್ಕೆ ಜಿ.ಪಿ. ಎಸ್ .ಅಳವಡಿಸಿ ಮಾನಿಟರ್ ಮಾಡಲು ವ್ಯವಸ್ಥೆ ಮಾಡಲಾಗಿದೆ. 24*7 ಸಿ.ಸಿ.ಟಿ.ವಿ ಕಣ್ಗಾವಿನಲ್ಲಿಯೇ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣೀಕರಿಸಿರುವ ಮತ್ತು ವಿತರಿಸುವ ಬಗ್ಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಅಳವಡಿಸಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ಆಸನ, ಬೆಳಕು, ಫ್ಯಾನ್, ಕುಡಿಯುವ ನೀರು ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ವೈದ್ಯರನ್ನೊಳಗೊಂಡ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. 

    ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಅವಶ್ಯಕತೆಗನುಗುಣವಾಗಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

    ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಇಲಾಖೆಯಿಂದ ತಾಲ್ಲೂಕು ಮತ್ತು ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಜಾಗೃತದಳದ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.

    ಸಭೆಗೆ ಮುನ್ನ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಪಿಯುಸಿ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಗೊಂದಲ ಹಾಗೂ ಧೈರ್ಯಗೆಡದಂತೆ ನಿರಾತಂಕವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆಗಳನ್ನು ಮಾಡಿಕೊಡಬೇಕು. ಪರೀಕ್ಷೆ ಕುರಿತು ಯಾವುದೇ ರೀತಿಯ ವದಂತಿಗಳು, ಸೋಷಿಯಲ್ ಮೀಡಿಯಾದಲ್ಲಿನ ನಕಲಿ ಸುದ್ದಿಗಳಿಗೆ ಕಿವಿಗೊಡದೆ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಸಿಸಿ ಟಿವಿ, ವೆಬ್‌ಕಾಸ್ಟಿಂಗ್ ಮತ್ತು ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುವಂತೆ ತಿಳಿಸಿದರು.

    ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ,, ಡಿಡಿಪಿಯು ಮಾರುತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರರುಗಳು, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    6 − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.