Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೊಯಲು ಸಂಘ ಸಂಸ್ಥೆಗಳ ಪಾತ್ರ ಗಣನೀಯವಾದದ್ದು: ಸಂಸದ ಕೋಟ
    ಊರ್ಮನೆ ಸಮಾಚಾರ

    ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೊಯಲು ಸಂಘ ಸಂಸ್ಥೆಗಳ ಪಾತ್ರ ಗಣನೀಯವಾದದ್ದು: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೊಯಲು ಸಂಘ ಸಂಸ್ಥೆಗಳ ಪಾತ್ರ ಗಣನೀಯವಾದದ್ದು ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕೋಡಿ ಕನ್ಯಾಣ‌ ಶ್ರೀರಾಮ ದೇಗುಲದ ವಠಾರದಲಿ ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘ  ಕೋಡಿ ಕನ್ಯಾಣ ಇವರ ನೇತೃತ್ವದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇಲ್ಲೆ ಇವರ ಸಹಯೋಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಿಕಾ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣ ಯಕ್ಷ ವೇದಿಕೆ ಕೋಡಿ ಕನ್ಯಾಣ ಇವರ ಕೂಡುವಿಕೆಯಲ್ಲಿ  ಪ್ರತೀಶ್ ಕುಮಾರ್ ಬ್ರಹ್ಮಾವರ ಇವರ ನಿರ್ದೇಶನದಲ್ಲಿ ಯಕ್ಷಗಾನ ಕುಶ-ಲವ ಕುಟುಂಬ, ಜಾನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಯಕ್ಷಗಾನ ಕಲೆ ಅತ್ಯಂತ ಶ್ರೀಮಂತ ಕಲೆಯಾಗಿದ್ದು ಕರಾವಳಿ ಈ ಮಣ್ಣಿನ ಸೊಗಡಿಗೆ ಭಾಷಾ ಜ್ಞಾನದ ಜತೆಗೆ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ. ಈ ದಿಸೆಯಲ್ಲಿ ಶ್ರೀರಾಮಪ್ರಸಾದಿತ ಯಕ್ಷಗಾಮ ಕಲಾ ಸಂಘ ಯುವ ಕಲಾವಿದರಿಗೆ ಸ್ಪೂರ್ತಿಯ ನೆಲೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

    ಶ್ರೀರಾಮಪ್ರಸಾದಿತ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಜಗನ್ನಾಥ ಅಮೀನ್ ಕೋಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಾಮಾಜಿಕ ಕಾರ್ಯಕರ್ತರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಸಂಘದ ಸಂಸ್ಥಾಕ ಮಹಾಬಲ ಭಂಡಾರಿ, ಮಾಜಿ ಜಿ.ಪಂ ಸದಸ್ಯ ಶಂಕರ್ ಎ. ಕುಂದರ್, ಯಾಂತ್ರಿಕ ಮೀನುಗಾರ ಸಂಘ ಹಂಗಾರಕಟ್ಟೆ ಕೋಡಿ ಬೇಂಗ್ರೆ ಅಧ್ಯಕ್ಷ ರಾಜು ಎನ್ ಬಂಗೇರ, ಶ್ರೀ ರಾಮ ದೇಗುಲದ ಅಧ್ಯಕ್ಷ ರಾಘವೇಂದ್ರ ಕರ್ಕೇರ, ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ರಾಮ ದೇಗುಲದ ಪ್ರದಾನ ಅರ್ಚಕ ಭಾಸ್ಕರ್ ಬಾಯರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸುರೇಂದ್ರ ಕೋಡಿ, ಉದ್ಯಮಿ ಅಂತೋನಿ ಡಿಸೋಜ, ಕೋಡಿ ಶಾಲಾ ದೈಹಿಯ ಶಿಕ್ಷಣ ಶಿಕ್ಷಕರಾದ ವಿಜಯ ನಾಯರಿ, ಉದ್ಯಮಿ ಶಂಕರ್ ಕುಂದರ್ ಉಪಸ್ಥಿತರಿದ್ದರು.

    ಸಂಘದ ರಾಜೇಶ್ ಎನ್. ಕರ್ಕೇರ ಸ್ವಾಗತಿಸಿ, ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು, ರಾಧಕೃಷ್ಣ ಸಾಲಿಯಾನ್ ವಂದಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ನಂತರಪ್ರತೀಶ್ ಕುಮಾರ್ ನಿರ್ದೇಶನದಲ್ಲಿ ಸಂಘದ ಕಲಾವಿದರಿಂದ ಕುಶಲವ ಕುಟುಂಬ ಯಕ್ಷಗಾನ ಪ್ರದರ್ಶನ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸರಸ್ಪತಿ ಜಾನಪದ ತಂಡ ಮಲ್ಪೆ ಇವರಿಂದ ಜಾನಪದ ನೃತ್ಯೋತ್ಸವ ಸ್ಥಳೀಯ ಸಂಘ ಸಂಸ್ಥೆಗಳಿಂದ ಜನಪದ ಗೀತೆಗಳು ಮತ್ತು ಭಾವಗೀತಾ ಸಂಗೀತೆಗಳು ಜರಗಿದವು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    20 + 15 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.