ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (IMJISC) ಐಟಿ ಮತ್ತು ಕೋಡಿಂಗ್ ಕ್ಲಬ್ ನ ಅಡಿಯಲ್ಲಿ “ಚಿಂತನೆಗಳನ್ನು ಸಂಶೋಧನಾತ್ಮಕ ಪ್ರಕಟಣೆಗಳಾಗಿ ಪರಿವರ್ತಿಸುವುದು – ಸಂಶೋಧನಾ ಬರವಣಿಗೆಗೆ ಆರಂಭಿಕ ಮಾರ್ಗದರ್ಶಿ” ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಎಂಐಟಿಕೆ ಯ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್‌ನ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ. ಮಂಜುನಾಥ ರಾಮಣ್ಣ ಲಮಾಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು ವಿದ್ಯಾರ್ಥಿಗಳಿಗೆ ಸಂಶೋಧನಾ ಬರವಣಿಗೆಯ ಮೂಲಭೂತ ಅಂಶಗಳು, ವಿಷಯಗಳ ಆಯ್ಕೆ, ಪ್ರಬಂಧ ರಚನೆ ಮತ್ತು ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರಕಟಣೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಅವರು ವಿದ್ಯಾರ್ಥಿಗಳಿಗೆ ವಿಚಾರಗಳನ್ನು ಸಂಶೋಧನಾತ್ಮಕ ಪ್ರಕಟಣೆಗಳಾಗಿ ಪರಿವರ್ತಿಸಲು ಪ್ರೋತ್ಸಾಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ವಹಿಸಿದ್ದರು. ಬಿಸಿಎ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಮತ್ತು ಉದ್ಯೋಗ ಮತ್ತು ತರಬೇತಿ ಅಧಿಕಾರಿ ನಾಫಿಯಾ ಅಕ್ತರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಿಂಚನಾ ಕಾರ್ಯಕ್ರಮವನ್ನು ನಿರೂಪಿಸಿ, ವಫಾ ನಾಜ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸಂತೃಪ್ತಿ ವಂದಿಸಿದರು.










