Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರೋಗ್ಯಕರ ಬದಲಾವಣೆಗಳಿಂದ ಉತ್ತಮ ಸಮಾಜ ನಿರ್ಮಾಣ: ಡಾ. ರಾಬರ್ಟ್ ರೋಡ್ರಿಗಸ್
    ಊರ್ಮನೆ ಸಮಾಚಾರ

    ಆರೋಗ್ಯಕರ ಬದಲಾವಣೆಗಳಿಂದ ಉತ್ತಮ ಸಮಾಜ ನಿರ್ಮಾಣ: ಡಾ. ರಾಬರ್ಟ್ ರೋಡ್ರಿಗಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಟಿವಿ ಟೆಕ್ನಿಷಿಯನ್ ಹಾಗೂ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೋಡ್ರಿಗಸ್ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತ್ವರಿತ ಯಶಸ್ಸಿನತ್ತ ಹೆಚ್ಚು ಆತುರಪಡಬಾರದು ಎಂದು ಸಲಹೆ ನೀಡಿದರು. ಕೊರೋನಾ ಸಂದರ್ಭದಲ್ಲಿ ಸಹಬಾಳ್ವೆ ಹಾಗೂ ಜೀವನ ಮೌಲ್ಯಗಳ ಮಹತ್ವವನ್ನು ನಾವು ಕಲಿತಿದ್ದೇವೆ. ಎಷ್ಟೇ ಸಾಧನೆ ಮಾಡಿದರೂ ವ್ಯಕ್ತಿತ್ವವೇ ನಮ್ಮನ್ನು ಗುರುತಿಸುವುದಾಗಿ, ಆದ್ದರಿಂದ ಹಣಕ್ಕಿಂತ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಮತ್ತು ದೃಢಸಂಕಲ್ಪ ಮುಖ್ಯವೆಂದು ಹೇಳಿದರು.

    “ಆರೋಗ್ಯಕರ ಬದಲಾವಣೆಗಳಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಆ ಉತ್ತಮ ಬದಲಾವಣೆ ನಿಮ್ಮಿಂದಲೇ ಆರಂಭವಾಗಲಿ,” ಎಂದು ಕರೆ ನೀಡಿದ ಅವರು ಕೃಷಿ ಹಾಗೂ ಟಿವಿ ಟೆಕ್ನಿಷಿಯನ್ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಇನ್ನೋರ್ವ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಬ್ರಹ್ಮಾವರ ಎ.ಎಸ್.ಐ  ಲಕ್ಕಪ್ಪ, ಮಾತನಾಡಿ, ಕೃಷಿಯ ಜೊತೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರಾರ್ಥಿಗಳನ್ನು ಹೆಚ್ಚು ಜಾಗರೂಕರನ್ನಾಗಿ ಮಾಡಿದೆ. ಸಮಯ ನಿರ್ವಹಣೆಯ ಮಹತ್ವವನ್ನು ಒತ್ತಿ ಹೇಳಿ, ಸವಾಲುಗಳನ್ನು ಧೈರ್ಯದಿಂದ ಸ್ವೀಕರಿಸಿ ಸಮಾಜದಲ್ಲಿ ಯಶಸ್ವಿ ವ್ಯಕ್ತಿಗಳಾಗುವಂತೆ ಶುಭಾಶಯ ಕೋರಿದರು.

    ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಬೊಮ್ಮಯ್ಯ ಎಂ ಅವರು ಸಂಸ್ಥೆಯೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವಂತೆ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಶಿಬಿರಾರ್ಥಿಗಳು ತರಬೇತಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಿರುವುದಕ್ಕೆ ಅಭಿನಂದಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ನಂದನ್, ಪ್ರತ್ಯಕ್ಷ ಶೆಟ್ಟಿ ಹಾಗೂ ಜೋಸೆಫ್, ಸುನಂದಾ ಲಮಣಿ, ಪ್ರಶಾಂತ್ ಶಿಬಿರಾರ್ಥಿಗಳು ತರಬೇತಿಯ ಅನುಭವವನ್ನು ಹಂಚಿಕೊಂಡರು.

    ಈ ಸಂಧರ್ಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಟೂಲ್ ಕಿಟ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿ ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ಸಂತೋಷ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    one × three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.