Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹನೀಯರುಗಳ ತತ್ವ, ಆದರ್ಶ ಪಾಲನೆಯಿಂದ ಮೌಲ್ಯಯುತ ಸಮಾಜ ನಿರ್ಮಾಣ: ಅಪರ ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮಹನೀಯರುಗಳ ತತ್ವ, ಆದರ್ಶ ಪಾಲನೆಯಿಂದ ಮೌಲ್ಯಯುತ ಸಮಾಜ ನಿರ್ಮಾಣ: ಅಪರ ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.  
    ಉಡುಪಿ
    : ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಹಲವಾರು ದಾರ್ಶನಿಕರುಗಳು ಸರಳ ಜೀವನ ನಡೆಸವುದರೊಂದಿಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರುಗಳು ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದ್ದಲ್ಲಿ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಮತ್ತು ಯೋಗಿ ನಾರೇಯಣ ಯತೀಂದ್ರ ಜಯಂತಿ (ಕೈವಾರ ತಾತಯ್ಯ) ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

    ಶ್ರೀ ರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ಮತ್ತಿತರ ಮಹನೀಯರುಗಳು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನೆನೆಯುವ ಸಲುವಾಗಿ ಹಾಗೂ ಮುಂದಿನ ಪೀಳಿಗೆಗೆ ಇವರುಗಳ ಜೀವನಾದರ್ಶಗಳನ್ನು ತಿಳಿಸುವ ಸಲುವಾಗಿ ಜಯಂತಿ ಕಾರ್ಯಕ್ರಮಗಳನ್ನು ಸರಕಾರದ ವತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಮಹನೀಯರುಗಳು ನೀಡಿದ ಸಂದೇಶಗಳು ಜೀವನ ರೂಪಿಸಿಕೊಳ್ಳುವುದಕ್ಕೆ ಸಹಕಾರಿಯಾಗಲಿದ್ದು, ಇವುಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.

    ರೇಣುಕಾಚಾರ್ಯ ಹಾಗೂ ಕೈವಾರ ತಾತಯ್ಯ ಅವರು ತಮ್ಮ ಬದುಕಿನಲ್ಲಿ ಕಂಡುಕೊಂಡಿದ್ದ ಸತ್ಯಗಳಿಂದಲೇ ಜಗತ್ತನ್ನು ಉದ್ದಾರ ಮಾಡಲು ಪ್ರಯತ್ನಿಸಿದ್ದರು. ತಮ್ಮದೇ ಶೈಲಿಯಲ್ಲಿ ಸಮಾಜ ಸುಧಾರಣೆಯ ಮಾರ್ಗಗಳನ್ನು ಕಂಡುಕೊಂಡಿದ್ದರು ಎಂದ ಅವರು, ಪ್ರತಿಯೊಬ್ಬರಲ್ಲೂ ಇತರರ ಬಗ್ಗೆ ಒಳ್ಳೆಯ ಭಾವನೆ ಹೊಂದಿರಬೇಕು. ಮಕ್ಕಳು ತಮ್ಮ ತಂದೆ-ತಾಯಿಗಳಿಗೆ ವಿಧೇಯರಾಗಿರುವುದರೊಂದಿಗೆ ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಕೌಶಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಚಿಂತನೆ ನಡೆಸಬೇಕು ಎಂದರು.  

    ಉಪನ್ಯಾಸ ನೀಡಿ ಮಾತನಾಡಿದ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನ ಪಚ್ಚಿನಡ್ಕ, 18ನೇ ಶತಮಾನದ ಕಾಲಜ್ಞಾನಿಗಳಾದ ಯೋಗಿ ನಾರೇಯಣ ಯತೀಂದ್ರರು, ತಮ್ಮ ಸಾಂಸಾರಿಕ ಜೀವನದಲ್ಲಿ ನಡೆದ ಕಹಿ ಘಟನೆಯಿಂದ ಬೇಸತ್ತು ಕುಟುಂಬವನ್ನು ತೊರೆದ ಇವರು ಧ್ಯಾನ ಮಾಡುತ್ತಾ  ಭಗವಂತನ ಇರುವಿಕೆಯನ್ನು ಕಂಡುಕೊಳ್ಳಲು ಆಧ್ಯಾತ್ಮದತ್ತ ಮುಖಮಾಡುತ್ತಾರೆ. ಕನ್ನಡ ಮತ್ತು ತೆಲುಗಿನಲ್ಲಿ ಭಕ್ತಿ ಗೀತೆಗಳು, ತತ್ವಪದಗಳು ಮತ್ತು ಭವಿಷ್ಯವಾಣಿಗಳನ್ನು (ಕಾಲಜ್ಞಾನ) ರಚಿಸುವುದರೊಂದಿಗೆ ಸುಧೀರ್ಘ 110 ವರ್ಷಗಳ ಕಾಲ ಬದುಕುವುದರೊಂದಿಗೆ ಕೈವಾರ ತಾತಯ್ಯನಾಗಿ ಸಮಾಜಕ್ಕೆ ಭಕ್ತಿ ಮತ್ತು ಮಾನವೀಯತೆಯನ್ನು ಬೋಧಿಸಿ, ಪವಾಡ ಪುರುಷರು ಎಂದೆನಿಸಿಕೊಂಡಿದ್ದಾರೆ ಎಂದರು.

    Click here

    Click here

    Click here

    Click Here

    Call us

    Call us

    ವೀರಶೈವ ಧರ್ಮದ ಮಹಾನ್ ಶರಣ ಮತ್ತು ಗುರುಗಳಲ್ಲಿ ಒಬ್ಬರಾದ ಜಗದ್ಗುರು ರೇಣುಕಾಚಾರ್ಯ ಅವರು ಸುಮಾರು 900-1000 ವರ್ಷಗಳ ಹಿಂದೆ ಬದುಕಿದ್ದರು ಎಂದು ದಾಖಲೆಗಳು ತಿಳಿಸುತ್ತವೆ. ಅವರ ತತ್ವ, ಬದುಕಿನ ಚರಿತ್ರೆ ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ ಪಡೆದಿವೆ. ಋಷಿಗಳ ಜೊತೆಯಲ್ಲಿ ಶಿವತತ್ವವನ್ನು ಆಳವಾಗಿ ಅಧ್ಯಯನ ಮಾಡುವ ಮೂಲಕ ಶಿವತತ್ವವನ್ನು ಜಗತ್ತಿಗೆ ಸಾರಿದ್ದರು. ಲಿಂಗಾಯತ ಧರ್ಮದ ಸಿದ್ಧಾಂತಗಳನ್ನು ಪ್ರತಿಪಾದಿಸಲು ಮತ್ತು ಶೈವ ಪರಂಪರೆಯನ್ನು ಬಲಪಡಿಸಲು ಅವರು ತಮ್ಮ ಜೀವನವನ್ನು ಮೀಸಲಾಗಿಟ್ಟಿದ್ದರು ಎಂದರು.

    ಕಾರ್ಯಕ್ರಮದಲ್ಲಿಉಪ ತಹಶೀಲ್ದಾರ್ ಗಳಾದ ನವನೀತ್ ಹಾಗೂ ಜಯಲಕ್ಷ್ಮೀ, ಸಮುದಾಯದ  ಸದಸ್ಯರು, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ಧಬಸಯ್ಯ ಚಿಕ್ಕಮಠ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    twelve + 20 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.