ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಡಾ. ಬಾಬು ಜಗ ಜೀವನ ರಾಂ ಅವರ 119 ನೇ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದಕ್ಕಾಗಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 10 ರ ಒಳಗಾಗಿ ಸದರಿ ಕಛೇರಿಗಳಿಗೆ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.










