Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ

    Updated:10/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ  ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ  ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

    Click Here

    Call us

    Click Here

    ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು, ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು. ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಗೊಳಿಸಲು ತಿಳಿಸಿದರು. ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಬೇಕು. ಎಲ್ಲ ಅಗತ್ಯ ಕ್ರಮಗಳನ್ನು ಕಾಲಮಿತಿಯಲ್ಲಿ ನಡೆಸಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯ ಕುಮಾರ್ ಶೆಟ್ಟಿ, ಸಹಾಯಕ ಕಮಿಷನರ್ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    sixteen + 20 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.