Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಟೀಂ ಯುವಶಕ್ತಿ ಟ್ರಸ್ಟ್ʼ ಉದ್ಘಾಟನೆ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಟೀಂ ಯುವಶಕ್ತಿ ಟ್ರಸ್ಟ್ʼ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು.

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ʼಟೀಂ ಯುವಶಕ್ತಿ ಟ್ರಸ್ಟ್ʼ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ  ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು ಈ ಕಾರ್ಯ ನಿಜಕ್ಕೂ ಅಭಿನಂದನೀಯ. ಅವರುಗಳು ಈ ಕಾರ್ಯ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಲಿ ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಮಾತನಾಡಿ, ವಿದ್ಯಾರ್ಥಿಗಳ ಈ ಕೆಲಸ ಕಾಲೇಜಿನ ಹೆಮ್ಮೆ. ಇನ್ನಷ್ಟು ವಿದ್ಯಾರ್ಥಿಗಳು ಇಂತಹ ಒಳ್ಳೆಯ ಕೆಲಸದಲ್ಲಿ ತೊಡಗಿಕೊಳ್ಳಿ.  ವಿದ್ಯಾರ್ಥಿಗಳು ಈ  ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

    ವೇದಿಕೆಯಲ್ಲಿ ಮಾಜಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಆರ್.ಎನ್.ಎಸ್, ಬೆಂಗಳೂರು ಇದರ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಭಾಕರ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ, ಭಂಡಾರ್ಕಾರ್ಸ್ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಅರುಣ್ ಕುಮಾರ್ ಎ.ಎಸ್. ,ಭಂಡಾರ್ಕಾರ್ಸ್ ಪದವಿ ಕಾಲೇಜಿನ ಕಛೇರಿ ವ್ಯವಸ್ಥಾಪಕರಾದ ಗೋಪಾಲ್ ನಾಯ್ಕ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ ಇದರ ಶರತ್ ಕಾಂಚನ್, ಹೆಲ್ಪಿಂಗ್ ಹ್ಯಾಂಡ್ಸ್ ಇದರ ಸದಸ್ಯರಾದ ರತನ್ ಅವರನ್ನು ಸನ್ಮಾನಿಸಲಾಯಿತು ಹಾಗೂ ಅವರ ತಂಡದ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ನಾಡ ಗ್ರಾಮದ ಕೋಣ್ಕಿ ಇಲ್ಲಿನ ವಿಶೇಷ ಚೇತನ ಶ್ರೀರಕ್ಷಾ ಶೆಟ್ಟಿ ಅವರಿಗೆ ಮ್ಯೂಸಿಕ್ ಸ್ಟ್ಯಾಂಡ್ ನೀಡಿ ಗೌರವಿಸಲಾಯಿತು. ಚರ್ಚ್ ರಸ್ತೆಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪುಸ್ತಕ  ಮತ್ತು ಬೋರ್ಡ್ ಹೈಸ್ಕೂಲ್, ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳಿಗೆ ಬ್ಯಾಗಗಳು, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

    ರಾಘವೇಂದ್ರ, ಚೈತ್ರ ಸಂಜೀವ, ವಸಂತಿ ಆಚಾರ್ಯ ಮತ್ತು ನಾಗೇಂದ್ರ ಅವರಿಗೆ ಧನಸಹಾಯ ಮಾಡಲಾಯಿತು. ರೇಡಿಯೋ ಕುಂದಾಪುರ 89.6 ಎಫ್.ಎಮ್ ಇದರ ಕಾರ್ಯಕ್ರಮ ನಿರ್ವಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಧನುಷ್ ಸ್ವಾಗತಿಸಿ, ಟೀಂ ಯುವಶಕ್ತಿ ಟ್ರಸ್ಟ್ ಇದರ ಸದಸ್ಯ ಮತ್ತು ಕಾಲೇಜಿನ ವಿದ್ಯಾರ್ಥಿ ಶಶಾಂಕ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    13 − 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.