ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೊಮೆ ಸಮುದ್ರ ತೀರದಲ್ಲಿರುವ ರೆಸಾರ್ಟಗಳಿಗೆ ಆಗಮಿಸುವ ಪ್ರವಾಸಿಗರಿಂದ ಮಲಿನಗೊಳ್ಳುತ್ತಿರುವ ಹಿನ್ನಲ್ಲೆಯಲ್ಲಿ ತೆಕ್ಕಟ್ಟೆ ಗ್ರಾ.ಪಂ ವ್ಯಾಪ್ತಿಯ ಕೊಮೆ ಭಾಗದ ಗ್ರಾಮಸ್ಥರು ಕೋಟ ಆರಕ್ಷಕ ಠಾಣೆಗೆ ತೆರಳಿ ಆರಕ್ಷಕ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ದೂರು ನೀಡಿದರು.

ಈ ವೇಳೆ ಗ್ರಾಮಸ್ಥರು ಮಾಧ್ಯಮಕ್ಕೆ ಮಾಹಿತಿ ನೀಡಿ ಸಮುದ್ರ ತೀರದಲ್ಲಿ ಪಾರ್ಟಿಗಳನ್ನು ಮಾಡುವುದರ ಮೂಲಕ ಮದ್ಯದ ಬಾಟಲಿಗಳನ್ನು ಹಾಗೂ ಆಹಾರ ಪದಾರ್ಥಗಳನ್ನು ಸಮುದ್ರ ತೀರದಲ್ಲೆ ಎಸೆದು ಪರಿಸರವನ್ನು ಹಾಳುಗೆಡವುತ್ತಿದ್ದಾರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪರಿಸರದ ಗ್ರಾಮದ ಗ್ರಾಮಸ್ಥರು ಇದ್ದರು.










