Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮ ವಹಿಸಿ – ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮ ವಹಿಸಿ – ಜಿಲ್ಲಾಧಿಕಾರಿ

    Updated:12/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಮಾ.12:
    ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಗೃಹ ಬಳಕೆಯ ಎಲ್ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಬಗ್ಗೆ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡದಂತೆ ಅವರುಗಳಿಗೆ ಪ್ರಸ್ತುತ ಸನ್ನಿವೇಶವನ್ನು ವಿವರಿಸಿ, ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂಬುದನ್ನು ಗ್ರಾಹಕರುಗಳಿಗೆ ಮನದಟ್ಟು ಮಾಡಿಸಬೇಕು ಎಂದರು.

    ಜಿಲ್ಲೆಯಲ್ಲಿ ಹೆಚ್ಚು ಗೃಹ ಬಳಕೆದಾರರು ಎರಡು ಅನಿಲ ಸಂಪರ್ಕ ಹೊಂದಿದ್ದು, ಏಕ ಸಿಲಿಂಡರ್ ಹೊಂದಿದ್ದವರಿಗೆ ಆದ್ಯತೆಯ ಮೇಲೆ ಅನಿಲ ಪೂರೈಕೆ ಮಾಡಬೇಕು. ಅನಿಲದ ಮಿತ ಬಳಕೆಯ ಬಗ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಮತ್ತು ಇತರರಿಗೆ ಜಾಗೃತಿ ಮೂಡಿಸಬೇಕು. ಆರೋಗ್ಯ, ವಾಣಿಜ್ಯ, ಕೈಗಾರಿಕೆ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರಿಗೆ, ಪೊಲೀಸ್ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಅಗತ್ಯವಿರುವ ಅನಿಲ ಸಿಲಿಂಡರ್‌ಗಳ ಬೇಡಿಕೆಯ ಪಟ್ಟಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದರು.

    ಬೇಡಿಕೆಯ ಭಾಗವನ್ನು ನಿರ್ವಹಿಸಲು ಪ್ರತಿ ಗ್ರಾಹಕರಿಗೆ ಕೊನೆಯ ಮರುಪೂರಣದ ದಿನಾಂಕದಿಂದ 25 ದಿನಗಳವರೆಗೆ ಇಂಟರ್-ಬುಕ್ಕಿಂಗ್ ಅವಧಿಯನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ಪ್ರಚುರಪಡಿಸಬೇಕು ಎಂದ ಅವರು, ಜಿಲ್ಲೆಯ ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅನಿಲ ಪೂರೈಕೆ ಕುರಿತು ಸಾರ್ವಜನಿಕ ಜಾಲತಾಣಗಳ ಮೂಲಕ ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದ ಅವರು, ಸಾರ್ವಜನಿಕರು ತೊಂದರೆಗಳನ್ನು ನಿವಾರಿಸಲು ಸಹಾಯವಾಣಿ ಸಂಖ್ಯೆಯನ್ನು 112 ಪ್ರಚಾರಪಡಿಸುವುದರೊಂದಿಗೆ ಸ್ವೀಕರಿಸಿದ ದೂರುಗಳನ್ನು ತಕ್ಷಣವೇ ಪರಿಹರಿಸುವಂತೆ ತಿಳಿಸಿದರು.

    ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ಗಳು ಕಾಳಸಂತೆಯಲ್ಲಿ ಮಾರಾಟ, ಸಂಗ್ರಹಣೆ, ಶೇಖರಣೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬAದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್ಗಳ ದಾಸ್ತಾನು, ಸಾಗಾಣಿಕೆ ಹಾಗೂ ರಿಫಿಲ್ಲಿಂಗ್ ಪ್ರಕರಣಗಳು ಕಂಡುಬAದಲ್ಲಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಅನಾವಶ್ಯಕವಾಗಿ ಜನರು ಗೃಹ ಬಳಕೆಯ ಅನಿಲಗಳನ್ನು ಆಟೋಮೋಬೈಲ್ ಗಳಿಗೆ ಬಳಸದಂತೆ ನೋಡಿಕೊಳ್ಳಬೇಕು. ಅನಿಲಗಳು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಲು ಗ್ಯಾಸ್ ಏಜೆನ್ಸಿಯ ಸಪ್ಲೆöÊರ್ಸ್, ಡೀರ್ಸ್ ಹಾಗೂ ಕಂಪನಿಗಳ ಸಹಕಾರ ಅತ್ಯಗತ್ಯ ಎಂದರು.

    ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಗ್ಯಾಸ್ ಏಜೆನ್ಸಿಯ ಮಾಲೀಕರುಗಳು, ಸರಬರಾಜುದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    nine − 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.