ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಹಜ ಯೋಗದಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಸಾಧ್ಯ. ಅತ್ಯಂತ ಸರಳವಾದ ಯೋಗ ಕ್ರಿಯೆಗಳು ಮತ್ತು ಕ್ರಮಬದ್ಧವಾದ ಆಹಾರ ಸೇವನೆಯಿಂದ ಒತ್ತಡವನ್ನು ನಿರ್ವಹಿಸಬಹುದು ಎಂದು ಚಂದ್ರಕಾಂತ ಡಿಯೋಡ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಸಹಜ ಯೋಗ ಕುರಿತ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

5 ಗೋಷ್ಠಿಯಲ್ಲಿ ನಡೆದ ಈ ಶಿಬಿರದಲ್ಲಿ ಡಾ| ಆಶಿಶ್, ಕಲ್ಪನಾ, ಕೋಪಾಲ್, ಪ್ರಣಮ್, ತಿಮ್ಮಪ್ಪ, ನೀತು, ಡಾ. ವೀರೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.










