Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಹೋಟಲ್ ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಉಡುಪಿ ಹೋಟಲ್ ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪಶ್ಚಿಮ ಎಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೋಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ ಕಟ್ಟಿಗೆ ಹಾಗೂ ವಿದ್ಯುತ್ ಉರುವಲುಗಳ ಬಳಕೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹ ಬಳಕೆ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿರುವುದಿಲ್ಲ. ವಾಣಿಜ್ಯ ಬಳಕೆಯ ಅನಿಲ ಹೊರ ದೇಶಗಳಿಂದ ಪೂರ್ಣ ಪ್ರಮಾಣದಲ್ಲಿ ಆಮದು ಆಗುತ್ತಿದ್ದು, ಯುದ್ಧ ಭೀತಿಯಿಂದಾಗಿ ಅನಿಲ ಆಮದು ನಿಗಧೀತ ಪ್ರಮಾಣದಲ್ಲಿ ಆಗದೆ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದು ತಾತ್ಕಾಲಿಕ ಸಮಸ್ಯೆ ಆಗಿದೆ. ಇದಕ್ಕೆ ಪರ್ಯಾಯ ಉರುವಲುಗಳ ಬಳಕೆಯೊಂದೇ ಮಾರ್ಗ ಎಂದರು.

    ಈಗಾಗಲೇ ಜಿಲ್ಲೆಯಲ್ಲಿ ಕೆಲವು ಹೋಟೆಲ್ ಉದ್ಯಮಗಳು ಕಟ್ಟಿಗೆ ಸೇರಿದಂತೆ ಮತ್ತಿತರ ಉರುವಲುಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ಹೋಟೆಲ್ ಉದ್ಯಮಗಳು ಇದಕ್ಕೆ ಒತ್ತು ನೀಡುವುದರೊಂದಿಗೆ ಹೋಟೆಲ್ ಉದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗವಕಾಶವನ್ನು ಮುಂದುವರೆಸುವುದು ಉತ್ತಮ. ಈಗಾಗಿರುವ ವ್ಯತ್ಯಯವು ತಾತ್ಕಾಲಿಕವಾಗಿದ್ದು, ಮುಂದೆ ಸಮಸ್ಯೆ ಸರಿಹೋಗಬಹುದಾಗಿದೆ ಎಂದರು.

    ಜಿಲ್ಲೆಯಲ್ಲಿ 25000 ದಿಂದ 30000 ಕ್ಕೂ ಹೆಚ್ಚು ಜನರು ಹೋಟೆಲ್ ಉದ್ಯಮದ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಹೆಚ್ಚು ಜನರು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿದ್ದಾರೆ. ಉದ್ಯಮದಲ್ಲಿ ವ್ಯತ್ಯಯ ಉಂಟಾಗಿ ಕಾರ್ಮಿಕರು ನಿರುದ್ಯೋಗಿಗಳಾಗಿ ಬೇರೆ ಉದ್ಯೋಗ ಅರಸಿ ಹೋದರೆ ಮುಂಬರುವ ದಿನಗಳಲ್ಲಿ ಹೋಟೆಲ್ ಗಳಲ್ಲಿ ಕಾರ್ಮಿಕರ ಸಮಸ್ಯೆ ಉಂಟಾಗುತ್ತದೆ. ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಜಿಲ್ಲೆಯಲ್ಲಿ 80 ಕ್ಕೂ ಹೆಚ್ಚು ಸಾಮಿಲ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಹೋಟೆಲ್ ಉದ್ಯಮಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಟ್ಟಿಗೆ ಲಭ್ಯವಾಗುವಂತೆ ಸಹಕರಿಸಬೇಕು ಎಂದ ಅವರು ಹೋಟೆಲ್ ಉದ್ಯಮಿಗಳು ತಮ್ಮ ದೈನಂದಿನ ಚಟುವಟಿಕೆಗೆ ವಿದ್ಯುತ್ ಸ್ಟವ್‌ಗಳ ಬಳಕೆಗೆ ಮುಂದಾದಲ್ಲಿ ಅವರುಗಳಿಗೆ ವಿದ್ಯುತ್ ಶಕ್ತಿ ಸರಬರಾಜು ಮಾಡುವ ಕಾರ್ಯವನ್ನು ಶೀಘ್ರದಲ್ಲಿಯೇ ಮಾಡಿಕೊಡಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಶಕ್ತಿ ಆಧಾರಿತ ಉಪಕಾರಣಗಳ ಬಳಕೆಗೆ ಅನುಕೂಲವಾಗುವಂತೆ ಅದರ ಉತ್ಪಾದಕರು ಸಹ ಸಹಕರಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಹೋಟೆಲ್ ಮಾಲಿಕರ ಸಂಘದವರು ಪ್ರಸ್ತುತ ಈ ಹಿಂದೆ ಸರಬರಾಜಾಗುತ್ತಿದ್ದ ವಾಣಿಜ್ಯ ಸಿಲಿಂಡರ್ ಗಳ ಶೇ.25 ರಷ್ಟು ನೀಡಿದಲ್ಲಿ ನಮಗೆ ಅನುಕೂಲವಾಗುತ್ತಿದೆ ಎಂಬ ಮನವಿ ಕೇಳಿ ಬರುತ್ತಿದೆ ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ತಮ್ಮ ಬೇಡಿಕೆಯನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

    ಸಾಮಿಲ್ ಮಾಲಕರ ಸಂಘದ ಪದಾಧಿಕಾರಿಗಳು ಮಾತನಾಡಿ, ಹೋಟೆಲ್ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಾಮಿಲ್‌ಗಳಲ್ಲಿ ಕಟ್ಟಿಗೆಗಳನ್ನು ಪ್ರಸ್ತುತ ಇರುವ ಬೆಲೆಗೆ ಯಾವುದೇ ಬೆಲೆ ಏರಿಸದೆ ಮಾರಾಟ ಮಾಡುತ್ತೇವೆ ಎಂದರು.

    ಸಭೆಯಲ್ಲಿ ಜಿಲ್ಲಾ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರವೀಂದ್ರ, ಸಾಮಿಲ್ ಮಾಲಕರು ಮತ್ತಿತರರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    18 − 9 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.