Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಕಾಲೇಜು ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರ ಸಹಭಾಗಿತ್ವದಲ್ಲಿದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಇವರ ಸಹಕಾರದೊಂದಿಗೆ ಸ್ವಯಂ ಪ್ರೇರಿತ “ಬೃಹತ್ ರಕ್ತದಾನ ಶಿಬಿರ” ಜರುಗಿತು.

    Click Here

    Call us

    Click Here

    ರಕ್ತದಾನವು ಮಾನವೀಯತೆಯ ಅತ್ತ್ಯುತ್ತಮ ಸೇವೆಯಾಗಿದೆ. ಅನೇಕರ ಜೀವನಗಳಿಗೆ ಆಶಯಗಳನ್ನು ಒದಗಿಸುವಂತದ್ದು. ಜ್ಯೋತಿ ಬೆಳಗಿಸಿ, ಪ್ರಾರ್ಥನಾ ಗೀತೆ ಹಾಡುವ ಮುಖಾಂತರ ಚಾಲನೆ ನೀಡಲಾಯಿತು.

    ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಸ್. ಜಯಶಂಕರ್ ಶೆಟ್ಟಿ ಅವರು ವಿದ್ಯರ್ಥಿಗಳಿಗೆ ರಕ್ತದಾನದ ಮಹತ್ವ ಮತ್ತು ಅದರಿಂದ ಆರೋಗ್ಯಕ್ಕಾಗುವ ಉಪಯೋಗಗಳನ್ನು ತಿಳಿಸಿದರು. ಜೊತೆಗೆ ನಾವು ಈ ಕಾಲೇಜಿನಲ್ಲಿ ಸತತ 10 ವರ್ಷ ಗಳಿಂದ ರಕ್ತದಾನ ಶಿಬಿರವನ್ನು ನಡೆಸುತ್ತ ಬಂದಿದ್ದೇವೆ ಎಂದು ಸಂತಸಪಟ್ಟರು. ನೀವು ನೀಡುವ ರಕ್ತವು ಎಷ್ಟೋ ರೋಗಿಗಳಿಗೆ ಹಾಗೂ ಸೈನಿಕರಿಗೆ ಸಹಾಯವಾಗುತ್ತದೆ ಎಂದು ತಿಳಿಸಿದರು.

    ಕಾರ್ಯಕ್ರಮದ ಮತ್ತೊರ್ವ ಅತಿಥಿಯಾಗಿದ್ದ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಅವರು ರಕ್ತದಾನ ಶ್ರೇಷ್ಠದಾನ, ಎಲ್ಲರು ರಕ್ತದಾನ ಮಾಡಿ ತಮ್ಮ ಕೈಲಾದಷ್ಟು ಜೀವಗಳನ್ನು ಉಳಿಸಲು ಸಹಾಯ ಮಾಡಿ ಎಂದರು. ಇದು ಒಂದು ಸಮಾಜ ಸೇವೆ ಎಂದು ಅರಿವು ಮೂಡಿಸಿದರು, ಹಾಗೆಯೇ ತಮ್ಮ ಲಯನ್ಸ್ ಕ್ಲಬ್ ಇಂದ ಆಗುವ ಸಮಾಜ ಸೇವೆಗಳ ಬಗ್ಗೆ ಎಲ್ಲರ ಜೊತೆ ಹಂಚಿಕೊಂಡರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ಈ ರಕ್ತದಾನ ಶಿಬಿರ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು. ಅಂತೆಯೇ ಕಾಲೇಜಿನ ನಿರ್ದೇಶಕರಾದ ಡಾ. ಎಸ್. ಏನ್. ಭಟ್ ಅವರು ರಕ್ತದಾನವು ಒಂದು ನೊಬೆಲ್ ಆಕ್ಟಿವಿಟಿ ಅಂದರೆ ಇದು ಸಮಾಜದ ಋಣ ತೀರಿಸುವ ಒಂದು ಅವಕಾಶ. ಹಾಗೂ ಒಂದು ಯೂನಿಟ್ ರಕ್ತವು 3 ಜೀವಗಳನ್ನು ಉಳಿಸಬಲ್ಲದು ಎಂದು ಅಭಿಪ್ರಾಯ ಪಟ್ಟರು.

    Click here

    Click here

    Click here

    Click Here

    Call us

    Call us

    ಇದೇ ಸಂದರ್ಭದಲ್ಲಿ 107 ಬಾರಿ ರಕ್ತದಾನ ಮಾಡಿದ ವಿಜಯ ಪೂಜಾರಿ ಹಾಗೂ ಇನ್ನಿತರ ರೆಡ್ ಕ್ರಾಸ್ ಹಾಗೂ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ರಕ್ತದಾನ ಶಿಬಿರದಲ್ಲಿ ಕಾಲೇಜಿನ ಬಹುಪಾಲು ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾಲೇಜಿನ ರಾಷ್ಟೀಯ ಸ್ವಯಂ ಸೇವಾ ಕೋಶದ ಸಮನ್ವಯಕರಾದ ಗಗನ್ ಬಂಗೇರ ಅವರು ಅತಿಥಿಗಳಿಗೆ ಸ್ವಾಗತ ಕೋರಿದರು. ಜೊತೆಗೆ ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ಮಹಾಪ್ರಭು ನಿರೂಪಣೆ ಮಾಡಿ, ರೋಣಿತ್ ವಂದನಾರ್ಪಣೆಯನ್ನು ತಿಳಿಸಿದರು.

    ಕಾರ್ಯಕ್ರಮಕ್ಕೆ ಕಾಲೇಜಿನ ಎಲ್ಲ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ಮಹತ್ತರವಾದ ಪಾತ್ರ ವಹಿಸಿದರು. ಒಟ್ಟಿನಲ್ಲಿ ಈ ಬೃಹತ್ ರಕ್ತದಾನ ಶಿಬಿರವು ಯಶಶ್ವಿಯಾಗಿ ಜರುಗಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    12 + eighteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.