Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ
    alvas nudisiri

    ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ  29ನೇ ಪದವಿ ಪ್ರದಾನ ಸಮಾರಂಭವು ಉತ್ತರ ಪ್ರದೇಶದ ವಾರಾಣಸಿಯ ಬನಾರಸ್ ಹಿಂದೂ ವಿವಿಯಲ್ಲಿ ಇತ್ತೀಚೆಗೆ ನಡೆಯಿತು.

    ಈ ಸಂದರ್ಭದಲ್ಲಿ ಖ್ಯಾತ ಆಯುರ್ವೇದ ಹಾಗೂ ಶಿಕ್ಷಣ ತಜ್ಞ ಡಾ. ಎಮ್. ಮೋಹನ್ ಆಳ್ವಾರಿಗೆ “ಫೆಲೋ ಆಫ್ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ (FRAV)” ಎಂಬ ಪ್ರತಿಷ್ಠಿತ ಗೌರವ ಪ್ರದಾನಿಸಲಾಯಿತು.

    Click Here

    Call us

    Click Here

    ಈ ಗೌರವವನ್ನು ಆಯುರ್ವೇದ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ, ಸಂಶೋಧನೆ, ಶಿಕ್ಷಣ ಹಾಗೂ ಪರಂಪರೆಯ ಸಂರಕ್ಷಣೆಯಲ್ಲಿ ವಿಶೇಷ ಸಾಧನೆ ಮಾಡಿದ ಗಣ್ಯರಿಗೆ ನೀಡಲಾಗುತ್ತದೆ. ಡಾ. ಆಳ್ವರು ಈ ಎಲ್ಲಾ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

    ಡಾ. ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಲಕ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿ, ಅನೇಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ನೀಡುತ್ತಿದ್ದಾರೆ.

    ಆಯುರ್ವೇದ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಳ್ವರು, ಉಚಿತ ವೈದ್ಯಕೀಯ ಶಿಬಿರಗಳು, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಪಾರಂಪರಿಕ ಚಿಕಿತ್ಸಾ ವಿಧಾನಗಳ ಮೂಲಕ ಸಮಾಜಮುಖಿ ಸೇವೆಯನ್ನು ನಿರಂತರವಾಗಿ ಸಲ್ಲಿಸುತ್ತಿದ್ದಾರೆ.

    ಪ್ರಾಚೀನ ಆಯುರ್ವೇದ ಜ್ಞಾನವನ್ನು ಆಧುನಿಕ ವೈಜ್ಞಾನಿಕ ದೃಷ್ಟಿಕೋನದೊಂದಿಗೆ ಸಂಯೋಜಿಸುವಲ್ಲಿ  ಮಹತ್ವದ ಪಾತ್ರ ವಹಿಸಿದ್ದಾರೆ. ಈ ಮೂಲಕ ಆಯುರ್ವೇದವನ್ನು ಸಮಗ್ರ ಜೀವನಶೈಲಿಯಾಗಿ ಜನರಲ್ಲಿ ಪರಿಚಯಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ಶಿಕ್ಷಣ, ಸಂಸ್ಕೃತಿ ಮತ್ತು ಆರೋಗ್ಯ ಕ್ಷೇತ್ರಗಳನ್ನು ಒಟ್ಟಿಗೆ ಬೆಳೆಸುವ  ದೃಷ್ಟಿಕೋನವು ಅವರನ್ನು ವಿಶಿಷ್ಟ ವ್ಯಕ್ತಿತ್ವವನ್ನಾಗಿಸಿದೆ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುವ ಜೊತೆಗೆ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಯಲ್ಲಿಯೂ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ.

    ಆಳ್ವಾ ಫಾರ್ಮಸಿಯ ಮೂಲಕ ಆಯುರ್ವೇದ ಔಷಧಗಳ ತಯಾರಿಕೆ, ಗುಣಮಟ್ಟದ ನಿಯಂತ್ರಣ ಮತ್ತು ಪರಂಪರೆಯ ಔಷಧ ಪದ್ಧತಿಗಳ ಸಂರಕ್ಷಣೆಗೆ ಉತ್ತೇಜನ ನೀಡಲಾಗಿದೆ.

    ಇದಲ್ಲದೆ, ಶೋಭಾವನವು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಅಭಿವೃದ್ಧಿಪಡಿಸಲಾದ 150 ಏಕರೆ ವ್ಯಾಪ್ತಿಯ ವಿಶಾಲ ಔಷಧೀಯ ಸಸ್ಯಗಳ ತೋಟವಾಗಿದ್ದು, ಇದು 2000 ಕ್ಕೂ ಹೆಚ್ಚು ಸಸ್ಯ ಪ್ರಭೇದಗಳ ‘ವನ’ವಾಗಿದೆ. ಇಲ್ಲಿ ಆಯುರ್ವೇದ ಸಂಶೋಧನೆ, ಸಸ್ಯಾಧಾರಿತ ಶಿಕ್ಷಣ ಮತ್ತು ಜೈವಿಕ ಕೃಷಿಗೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಪ್ರಾಯೋಗಿಕ ಅಧ್ಯಯನಕ್ಕೆ ಅನುವು ಮಾಡಿಕೊಡುತ್ತಿದೆ.

    ಡಾ. ಎಂ. ಮೋಹನ್ ಆಳ್ವರಿಗೆ ಪ್ರದಾನಗೊಂಡಿರುವ ಈ ಗೌರವವು ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲದೆ, ಕರ್ನಾಟಕದ ಆಯುರ್ವೇದ ಮತ್ತು ಶಿಕ್ಷಣ ಕ್ಷೇತ್ರಕ್ಕೆ ರಾಷ್ಟ್ರಮಟ್ಟದಲ್ಲಿ ಲಭಿಸಿದ ಮಹತ್ವದ ಗೌರವವಾಗಿದೆ.

    ಕಾರ್ಯಕ್ರಮದಲ್ಲಿ  ಭಾರತ ಸರ್ಕಾರದ ಆಯುಷ್ ಸಚಿವಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್ ಕೋಟೆಚಾ, ನವದೆಹಲಿಯ ಭಾರತೀಯ ಸಂಪ್ರದಾಯಿಕ ವೈದ್ಯಕೀಯ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಡಾ. ಮನೀಷಾ ಕೋಟೇಕರ್ ಹಾಗೂ ಇನ್ನಿತರ ಗಣ್ಯರು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    10 + 18 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.