ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಘಟಕ ಸಂಯುಕ್ತ ಆಶ್ರಯದಲ್ಲಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಮ್ಯಾನ್ ಪವರ್ ಸಪೊರ್ಟ್ ಸರ್ವಿಸಸ್ ಇದರ ಹೆಚ್. ಆರ್. ಆದ ಗುರುಮೂರ್ತಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಉದ್ಯೋಗ ಅವಕಾಶಗಳಿದ್ದು ಅದಕ್ಕೆ ಪೂರಕವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಂಡು ತಮ್ಮ ವೃತ್ತಿ ಬದುಕುಗಳನ್ನು ರೂಪಿಸಿಕೊಳ್ಳಬೇಕೆಂದು ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಘಟಕದ ಮುಖ್ಯಸ್ಥರಾದ ಡಾ. ರವಿಚಂದ್ರ, ಸಂದೀಪ ಕೆ. ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ಸಂಯೋಜಿಸಿದರು. ಕಾಲೇಜಿನ ವಿದ್ಯಾಥಿಗಳು ವಿವಿಧ ಕಂಪನಿಗಳಾದ ಮದರಸನ್, ಟಯೋಟ, ಟಾಟಾ ಇಲೆಕ್ಟ್ರಾನಿಕ್ಸ್, ಪಾಕ್ಸ್‌ಕಾನ್ ಮೊದಲಾದ ಕಂಪನಿಗಳಲ್ಲಿ ಉದ್ಯೋಗ ಪ್ರಸ್ತಾಪ ಪತ್ರವನ್ನು ಪಡೆದಿರುತ್ತಾರೆ.










