Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ್ಯಾಷನಲ್ ಪಂಚಾಯತ್ ಆವಾರ್ಡ್‌ಗೆ ವಂಡ್ಸೆ ಪಂಚಾಯತ್ ರಾಜ್ಯದಿಂದ ನಾಮ ನಿರ್ದೇಶನ
    ಊರ್ಮನೆ ಸಮಾಚಾರ

    ನ್ಯಾಷನಲ್ ಪಂಚಾಯತ್ ಆವಾರ್ಡ್‌ಗೆ ವಂಡ್ಸೆ ಪಂಚಾಯತ್ ರಾಜ್ಯದಿಂದ ನಾಮ ನಿರ್ದೇಶನ

    Updated:25/03/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದಿಂದ ’ಸುಸ್ಥಿರ ಅಭಿವೃದ್ಧಿ ಗುರಿಗಳು’ ಎನ್ನುವ ವಿಷಯದ ಮೇಲೆ 9 ವಿಭಾಗಗಳಲ್ಲಿ ನ್ಯಾಷನಲ್ ಪಂಚಾಯತ್  ಆವಾರ್ಡ್ ನೀಡುತ್ತಿದ್ದು, ’ಆರೋಗ್ಯಕರ ಗ್ರಾಮ ಪಂಚಾಯತ್’ ವಿಭಾಗದಲ್ಲಿ ರಾಜ್ಯದಿಂದ ವಂಡ್ಸೆ ಗ್ರಾಮ ಪಂಚಾಯತ್ ಕೇಂದ್ರ ಸರಕಾರಕ್ಕೆ  ನಾಮ ನಿರ್ದೇಶನಗೊಂಡಿದೆ.

    Click Here

    Call us

    Click Here

    ಈ ದೇಶದಲ್ಲಿ ಒಟ್ಟು 2.68ಲಕ್ಷ ಗ್ರಾಮ ಪಂಚಾಯತ್‌ಗಳಿದ್ದು ಅಂತಿಮ 55ರ ಪಟ್ಟಿಯಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ಒಳಗೊಂಡಿದೆ. ಈಗಾಗಲೇ ಘನತ್ಯಾಜ್ಯ ವಿಲೇವಾರಿ ಘಟಕದ ಮೂಲಕ ರಾಜ್ಯ, ದೇಶದ ಗಮನ ಸಳೆದಿರುವ ವಂಡ್ಸೆ ಗ್ರಾಮ ಪಂಚಾಯತ್ ರಾಜ್ಯದಲ್ಲಿ ಪ್ರಥಮ ಬಾರಿಗೆ ಸಮುದಾಯ ಉಪಶಮನ ಆರೈಕೆ ಕೇಂದ್ರವನ್ನು ನಿರಾಮಯ ಸೊಸೈಟಿಯ ಮೂಲಕ ಅನುಷ್ಟಾನ ಮಾಡುವುದರರೊಂದಿಗೆ ರಾಜ್ಯದ ಗಮನ ಸೆಳೆದಿದೆ.

    ಅಂತಿಮ ಪ್ರಶಸ್ತಿ ಸುತ್ತಿಗಾಗಿ ಪರಿಶೀಲನೆ ಮಾಡಲು ಕೇಂದ್ರ ಸರಕಾರದ ಪಂಚಾಯತ್ ರಾಜ್ ಮಂತ್ರಾಲಯದ ಹಿರಿಯ ಅಧಿಕಾರಿಗಳಾದ ಪಿನಾಕಿ ತಹಬಿಲ್ದಾರ್ ಮತ್ತು ಡಾ. ಮಮತಾ ಅಧಿಕಾರಿಗಳ ತಂಡ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ್ದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ ಶೆಟ್ಟಿ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ., ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ, ಜಿಲ್ಲಾ ಪಂಚಾಯತ್ ಎಸ್.ಡಿ.ಜಿ ಸೆಲ್ ಮೇಲ್ವಿಚಾರಕ ಅನಿಲ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ತಾಲೂಕು ಪಂಚಾಯತ್ ಪ್ರಭಾರ ಯೋಜನಾಧಿಕಾರಿ ಸತೀಶ, ಸಹಾಯಕ ನಿರ್ದೇಶಕಿ ದೀಪಾ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯಿತಿ ಎಲ್ಲಾ ಮಾಜಿ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ ರಾಮ, ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಭಾಗ್ಯವತಿ, ಗ್ರಾಮ ಆಡಳಿತ ಅಧಿಕಾರಿ ವಿಘ್ನೇಶ, ಕೃಷಿ ಅಧಿಕಾರಿ ಪರಶುರಾಮ, ಪಶುವೈದ್ಯಾಧಿಕಾರಿ ಶ್ರೀದೀಕ್ಷಾ, ವಂಡ್ಸೆ ಶಾಲೆಯ ಮುಖ್ಯೋಪಾಧ್ಯಾಯರಾದ ಶಂಕರ್, ನಿರಾಮಯ ಸೊಸೈಟಿ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿಗಳು ಮುಂತಾದವರೊಂದಿಗೆ ಚರ್ಚಿಸಿ, ದಾಖಲೆಗಳನ್ನು ಪರಿಶೀಲಿಸಿ, ಕ್ಷೇತ್ರ ಭೇಟಿ ನಡೆಸಿದರು ಹಾಗೂ ಆರೋಗ್ಯ, ಶಿಕ್ಷಣ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕದ ಸಾಧನೆಗೆ ಪ್ರಶಂಸೆ ವ್ಯಕ್ತ ಪಡಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    18 + seventeen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.