ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ಪ್ರೊಡಕ್ಷನ್ ಪ್ರೊಸೆಸ್ ಮಾಡೆಲ್ ಮೇಕಿಂಗ್ಸ್ – Prod-vaganza ಸ್ಪರ್ಧೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ವಸ್ತುಗಳ ಉತ್ಪಾದನಾ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಹಾಗೂ ಉತ್ಪಾದನಾ ಪ್ರಕ್ರಿಯೆಯ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಹಿನ್ನೆಲೆಯಿಂದಾಗಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 12 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ತಮ್ಮ ಆಯ್ಕೆಯ ವಸ್ತುಗಳ ಉತ್ಪಾದನಾ ಪ್ರಕ್ರಿಯೆಗಳ ಕುರಿತು ತಂಡಗಳು ಸವಿಸ್ತಾರವಾಗಿ ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಸತೀಶ್ ಶೆಟ್ಟಿ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ, ಶ್ರೇಯಸ್ ಪ್ರಾಧ್ಯಾಪಕರು ವಾಣಿಜ್ಯ ವಿಭಾಗ ಹಾಗೂ ಕಾರ್ಯಕ್ರಮದ ಅತಿಥಿ ಮತ್ತು ತೀರ್ಪುಗಾರರಾಗಿ ಪ್ರಾಕ್ತನ ವಿದ್ಯಾರ್ಥಿ ನಿರಂಜನ್ ಶೆಟ್ಟಿ, ಜೊತೆಗೆ ಕಾರ್ಯಕ್ರಮ ಸಂಯೋಜಕರಾದ ಅವಿತಾ ಕೊರಿಯಾ ಪ್ರಾಧ್ಯಾಪಕರು ನಿರ್ವಹಣಾ ವಿಭಾಗ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮತ್ತು ನಿರ್ವಹಣಾ ವಿಭಾಗದ ಎಲ್ಲಾ ಪ್ರಾಧ್ಯಪಕರುಗಳು ಉಪಸ್ಥಿತರಿದ್ದರು.










