Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ
    alvas nudisiri

    ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತ ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು.

    Click Here

    Call us

    Click Here

    ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ, ಯಕ್ಷಗಾನ ಗೊಂಬೆ ಆಟವು ಕರಾವಳಿ ಭಾಗದ ಆಕರ್ಷಕ ಕಲೆಯಾಗಿದ್ದು, ಪಪೆಟ್ (ಗೊಂಬೆ)ಗಳ ಮೂಲಕ ಯಕ್ಷಗಾನದ ಕಥಾವಸ್ತುಗಳನ್ನು ಪ್ರದರ್ಶಿಸುವ ಕಲಾರೂಪಕವಾಗಿದೆ. ಈ ಕಲೆ ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಪರಿಚಯಿಸುವ ಮಹತ್ವದ ಮಾಧ್ಯಮ ಎಂದರು.  

    ಯಕ್ಷಗಾನ ಗೊಂಬೆ ಆಟಕ್ಕೆ ಸುಮಾರು 300 ರಿಂದ 400 ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಪುರಾತನ ಕಾಲದಲ್ಲಿ ಜನರಿಗೆ ರಾಮಾಯಣ, ಮಹಾಭಾರತ ಹಾಗೂ ಪುರಾಣಗಳ ಕಥೆಗಳನ್ನು ಸುಲಭವಾಗಿ ತಲುಪಿಸಲು ಈ ಕಲೆಯನ್ನು ಬಳಸಲಾಗುತ್ತಿತ್ತು. ಈ ಗೊಂಬೆಗಳನ್ನು ಸಾಮಾನ್ಯವಾಗಿ ಮರ, ಬಟ್ಟೆ ಮತ್ತು ಚರ್ಮದಿಂದ ತಯಾರಿಸಲಾಗುತ್ತದೆ. ಕಲಾವಿದರು ಬಿದಿರಿನ ಕಡ್ಡಿಗಳ ಅಥವಾ ದಾರಗಳ ಸಹಾಯದಿಂದ ಈ ಗೊಂಬೆಗಳನ್ನು ಚಲಾಯಿಸಿ ಜೀವಂತವಾಗಿರುವಂತೆ ಪ್ರದರ್ಶಿಸುತ್ತಾರೆ.  

    ಆಧುನಿಕ ಯುಗದಲ್ಲಿ ಟಿವಿ, ಸಿನೆಮಾ ಮತ್ತು ಡಿಜಿಟಲ್ ಮಾಧ್ಯಮಗಳ ಪ್ರಭಾವದಿಂದ ಈ ಕಲೆ ನಿಧಾನವಾಗಿ ಕಣ್ಮರೆಯಾಗುತ್ತಿದೆ. ಆದ್ದರಿಂದ, ಈ ಕಲೆ ಉಳಿಯಲು ಸರ್ಕಾರ ಹಾಗೂ ಸಾಂಸ್ಕೃತಿಕ ಸಂಸ್ಥೆಗಳು ವಿಶೇಷ ಪ್ರೋತ್ಸಾಹ ನೀಡಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ  ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪ್ರತಿಯೊಂದು ಕಲಾರೂಪವೂ ತನ್ನದೇ ಆದ ವೈಶಿಷ್ಟ್ಯ ಮತ್ತು  ಶ್ರೇಷ್ಠತೆಯನ್ನು ಹೊಂದಿದೆ. ಕಲೆಯ ಮೇಲಿನ ವಿಶೇಷ ಆಸಕ್ತಿ, ಶ್ರದ್ಧೆ ಮತ್ತು ತಾಳ್ಮೆಯಿದ್ದಾಗ ಮಾತ್ರ ಒಬ್ಬ ಕಲಾವಿದ ತನ್ನ ಪಾತ್ರವನ್ನು ಸಮರ್ಪಕವಾಗಿ ರೂಪಿಸಬಲ್ಲ.  ನಿರಂತರ ಅಭ್ಯಾಸದಿಂದ ಕಲೆ ಅರಳಿ ಬೆಳೆಯಲು ಸಾಧ್ಯ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಈ ಕಲೆಯನ್ನು ಪುನರುಜ್ಜೀವನಗೊಳಿಸಲು ಕೆಲವು ಮಹತ್ವದ ಯೋಜನೆಗಳನ್ನು ಕೇಂದ್ರ ಸರ್ಕಾರಕ್ಕೆ ಈ ವರದಿ ಶಿಫಾರಸು ಮಾಡಿದೆ. ಈ ಶಿಫಾರಸುಗಳನ್ನು ಸರ್ಕಾರ ಪರಿಣಾಮಕಾರಿಯಾಗಿ ಜಾರಿಗೆ ತಂದರೆ, ಯಕ್ಷಗಾನ ಗೊಂಬೆ ಆಟಕ್ಕೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ ಎಂದರು.
    ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ವಲಯದ ಸಹಾಯಕ ನಿರ್ದೇಶಕಿ ರಾಜೇಶ್ವರಿ ಕೆ.ಎಂ, ಸಹಾಯಕ ಡಿಸೈನರ್ ಅಶ್ವಿನ್ ಕುಮಾರ್, ಆಳ್ವಾಸ್ ಸ್ವಾಯತ್ತ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೇಶ್ ಕೈರೋಡಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಪ್ರಿಯಾ ಭಾರದ್ವಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.